ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆ ಜೋರಾಗಿದ್ದು, ಪ್ರತಿದಿನ ಲಕ್ಷಾಂತರ ಸಂಖ್ಯೆಯಲ್ಲಿ ಹೊಸ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಯ ಕಾರ್ಯವಿಧಾನ ಹೆಚ್ಚಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಹಾಗು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.
-
Ministry of Health & Family Welfare asks all States/UTs "to immediately increase testing in a strategic manner keeping in view the trend of case positivity in specific areas in the States/UTs" pic.twitter.com/oHSf8B0Efy
— ANI (@ANI) January 18, 2022 " class="align-text-top noRightClick twitterSection" data="
">Ministry of Health & Family Welfare asks all States/UTs "to immediately increase testing in a strategic manner keeping in view the trend of case positivity in specific areas in the States/UTs" pic.twitter.com/oHSf8B0Efy
— ANI (@ANI) January 18, 2022Ministry of Health & Family Welfare asks all States/UTs "to immediately increase testing in a strategic manner keeping in view the trend of case positivity in specific areas in the States/UTs" pic.twitter.com/oHSf8B0Efy
— ANI (@ANI) January 18, 2022
ಕೆಲವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ನಡೆಸುವ ಕಾರ್ಯದಲ್ಲಿ ಗಣನೀಯ ಕುಸಿತವಾಗಿದೆ. ಇದರಿಂದಾಗಿ ಹೆಚ್ಚಿನ ಜನರಿಗೆ ಸೋಂಕು ಹರಡುತ್ತಿದೆ. ಇಂತಹ ಪ್ರದೇಶಗಳ ಮೇಲೆ ತಕ್ಷಣವೇ ಗಮನಹರಿಸಿ, ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಆರ್ತಿ ಆಹುಜಾ ಸೂಚನೆ ನೀಡಿದ್ದಾರೆ.
ಒಮಿಕ್ರಾನ್ ದೇಶದಲ್ಲಿ ವೇಗವಾಗಿ ಹರಡುತ್ತಿದೆ. ಆದಾಗ್ಯೂ, ICMR ಪೋರ್ಟಲ್ನಲ್ಲಿ ಲಭ್ಯವಿರುವ ದತ್ತಾಂಶದ ಪ್ರಕಾರ ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಿಯಾದ ಪರೀಕ್ಷೆ ನಡೆಯುತ್ತಿಲ್ಲ ಎಂದಿದ್ದಾರೆ.
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂಗೆ ಬಿಜೆಪಿಯಲ್ಲೇ ಅಸಮಾಧಾನ : ವಾರಾಂತ್ಯ ಕರ್ಫ್ಯೂ ಅಗತ್ಯವಿಲ್ಲ ಎಂದ ಸಚಿವ ಜೋಶಿ
ಪ್ರಮುಖವಾಗಿ ಕರ್ನಾಟಕದ ಬೆಂಗಳೂರು, ನವದೆಹಲಿ, ಪಶ್ಚಿಮ ಬಂಗಾಳದ ಕೋಲ್ಕತ್ತಾ, ಮಹಾರಾಷ್ಟ್ರದ ಮುಂಬೈ, ಕೇರಳದ ಕೆಲ ಪ್ರದೇಶಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಹೆಚ್ಚಿನ ಪರೀಕ್ಷೆ ನಡೆಸುವಂತೆ ತಿಳಿಸಲಾಗಿದೆ.