ನವದೆಹಲಿ: ದೇಶದಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ಸಾಧ್ಯತೆಯನ್ನು ಅವಲೋಕಿಸಲು ಕೇಂದ್ರ ಸರ್ಕಾರವು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 18 ಮತ್ತು 22 ರ ನಡುವೆ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದ ಒಂದು ದಿನದ ಬಳಿಕ ಈ ಮಾಹಿತಿ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ಪರಿಕಲ್ಪನೆ ಕುರಿತು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಮುಂದಿನ ವರ್ಷದ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಈ ಸಂದರ್ಭದಲ್ಲೇ 'ಒಂದು ರಾಷ್ಟ್ರ, ಒಂದು ಚುನಾವಣೆ' ಪರಿಕಲ್ಪನೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ. ಈ ವರ್ಷದ ನವೆಂಬರ್-ಡಿಸೆಂಬರ್ ವೇಳೆಗೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ ಮತ್ತು ಮುಂದಿನ ವರ್ಷದ ಮೇ-ಜೂನ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
-
Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament.
— Pralhad Joshi (@JoshiPralhad) August 31, 2023 " class="align-text-top noRightClick twitterSection" data="
ಸಂಸತ್ತಿನ ವಿಶೇಷ ಅಧಿವೇಶನವನ್ನು… pic.twitter.com/k5J2PA1wv2
">Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament.
— Pralhad Joshi (@JoshiPralhad) August 31, 2023
ಸಂಸತ್ತಿನ ವಿಶೇಷ ಅಧಿವೇಶನವನ್ನು… pic.twitter.com/k5J2PA1wv2Special Session of Parliament (13th Session of 17th Lok Sabha and 261st Session of Rajya Sabha) is being called from 18th to 22nd September having 5 sittings. Amid Amrit Kaal looking forward to have fruitful discussions and debate in Parliament.
— Pralhad Joshi (@JoshiPralhad) August 31, 2023
ಸಂಸತ್ತಿನ ವಿಶೇಷ ಅಧಿವೇಶನವನ್ನು… pic.twitter.com/k5J2PA1wv2
'ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಈ ಹಿಂದೆ ಮಾತನಾಡಿದ್ದ ಪ್ರಧಾನಿ ಮೋದಿ, " ಪ್ರತಿ ತಿಂಗಳು ಒಂದಲ್ಲಾ ಒಂದು ರೀತಿಯ ಚುನಾವಣೆಗಳು ನಡೆಯುತ್ತಿದ್ದು, ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಈ ಕಾರಣದಿಂದ ಒಂದು ರಾಷ್ಟ್ರ ಒಂದು ಚುನಾವಣೆ ಪರಿಕಲ್ಪನೆ ಬಗ್ಗೆ ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವ ಅವಶ್ಯಕತೆಯಿದೆ. ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಇರಬೇಕೆಂದು" ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಚುನಾವಣೆ ನಡೆಸುವುದನ್ನು ಒತ್ತಿ ಹೇಳುತ್ತದೆ.
ಇದನ್ನೂ ಓದಿ : 'ಒಂದು ರಾಷ್ಟ್ರ, ಒಂದು ಚುನಾವಣೆ' ವಿಚಾರ : ಕಾಂಗ್ರೆಸ್ ಸದಸ್ಯರಿಂದ ವಿರೋಧ, ಸದನದಲ್ಲಿ ಗದ್ದಲ
ಇನ್ನು ಸಂಸತ್ತಿನ ವಿಶೇಷ ಅಧಿವೇಶನದ ಕುರಿತು ನಿನ್ನೆ ಎಕ್ಸ್ ಆ್ಯಪ್ನಲ್ಲಿ ಮಾಹಿತಿ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, " ಸೆಪ್ಟೆಂಬರ್ 18 ರಿಂದ 22ರ ವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದೆ. ಇದರಲ್ಲಿ ಒಟ್ಟು 5 ಅವಧಿಗಳು ಇರಲಿವೆ. 17 ನೇ ಲೋಕಸಭೆಯ 13 ನೇ ಅಧಿವೇಶನ ಹಾಗೂ ರಾಜ್ಯಸಭೆಯ 261 ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ" ಎಂದಿದ್ದರು.
ಈ ಅಧಿವೇಶದಲ್ಲಿಯೇ ಸರ್ಕಾರವು ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾಪವನ್ನು ಜಾರಿಗೆ ತರಲು ಮಸೂದೆಯನ್ನು ತರಬಹುದು ಎಂದು ಊಹಿಸಲಾಗಿದೆ. ಮತ್ತು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ನೀಡಿದ ಮೀಸಲಾತಿಯನ್ನು ನವೀಕರಿಸಬಹುದು ಎಂದು ಹೇಳಲಾಗುತ್ತದೆ. ಈ ಎರಡೂ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳಾಗಿರುವುದರಿಂದ ಎರಡೂ ಸದನಗಳಲ್ಲಿ ಮೂರನೇ ಎರಡರಷ್ಟು ಸದಸ್ಯರ ಬೆಂಬಲದೊಂದಿಗೆ ಅಂಗೀಕಾರದ ಅಗತ್ಯವಿದೆ.
ಇದನ್ನೂ ಓದಿ : 'ಒಂದು ರಾಷ್ಟ್ರ ಒಂದು ಚುನಾವಣೆ' ದೇಶಕ್ಕೆ ಅತ್ಯಗತ್ಯ: ಪ್ರಧಾನಿ ಮೋದಿ