ETV Bharat / bharat

ಬೂಸ್ಟರ್ ಡೋಸ್​ ನೀಡುವ ನನ್ನ ಸಲಹೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ: ರಾಹುಲ್ ಗಾಂಧಿ

author img

By

Published : Dec 26, 2021, 10:56 AM IST

ದೇಶದಲ್ಲಿ ಒಮಿಕ್ರಾನ್‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೂಸ್ಟರ್ ಡೋಸ್‌ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿದ್ದೆ. ನನ್ನ ಸಲಹೆಯನ್ನು ಸರ್ಕಾರ ಒಪ್ಪಿಕೊಂಡು, ದಿಟ್ಟ ನಿರ್ಧಾರ ಕೈಗೊಂಡಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಟ್ವೀಟ್​ ಮಾಡಿದ್ದಾರೆ.

Rahul Gandhi
Rahul Gandhi

ನವದೆಹಲಿ: ದೇಶದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಹೆಚ್ಚುವರಿ ಡೋಸ್ (ಬೂಸ್ಟರ್‌ ಡೋಸ್​) ನೀಡಲು ಕೇಂದ್ರ ಸರ್ಕಾರ ಕೈಗೊಂಡ ಕ್ರಮ ಸ್ವಾಗತಾರ್ಹ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಬೂಸ್ಟರ್ ಡೋಸ್‌ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿದ್ದೆ. ನನ್ನ ಸಲಹೆಯನ್ನು ಸರ್ಕಾರ ಒಪ್ಪಿಕೊಂಡಿದೆ. ಇದು ಸರಿಯಾದ ಹೆಜ್ಜೆ, ದೇಶದ ಜನರ ಸುರಕ್ಷತೆ ಸರ್ಕಾರದ ಹೊಣೆ ಎಂದಿದ್ದಾರೆ.

  • केंद्र सरकार ने बूस्टर डोज़ का मेरा सुझाव मान लिया है- ये एक सही क़दम है। देश के जन-जन तक वैक्सीन व बूस्टर की सुरक्षा पहुँचानी होगी।#BoosterJab #VaccinateIndia https://t.co/wUW7eYhEme

    — Rahul Gandhi (@RahulGandhi) December 26, 2021 " class="align-text-top noRightClick twitterSection" data=" ">

ಇದನ್ನೂ ಓದಿ: ದೇಶದ ಜನರಿಗೆ ಬೂಸ್ಟರ್‌ ಡೋಸ್‌ ಯಾವಾಗ ಕೊಡ್ತೀರಾ? ಸರ್ಕಾರಕ್ಕೆ ರಾಹುಲ್‌ ಗಾಂಧಿ ಪ್ರಶ್ನೆ

ದೇಶದಲ್ಲಿ ಕೋವಿಡ್​-19 ಪ್ರಕರಣಗಳ ಜೊತೆಗೆ ಒಮಿಕ್ರಾನ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್​ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಘೋಷಣೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.