ಲಖನೌ (ಉತ್ತರ ಪ್ರದೇಶ): ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಅಯೋಧ್ಯೆಯು ರಾಮ ಜನ್ಮಭೂಮಿಯೆಂದು ಜನಪ್ರಿಯವಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು, ಯಾತ್ರಾರ್ಥಿಗಳು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ಇದಕ್ಕಾಗಿ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರ 250 ಕೋಟಿ ರೂ. ನೀಡಿದೆ. 377 ಹೆಕ್ಟೇರ್‌ಗಿಂತ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇಲ್ಲಿ ಏರ್ಪೋರ್ಟ್ ನಿರ್ಮಿಸುವ ನಮ್ಮ ಪ್ರಸ್ತಾವನೆಗೆ ಕೇಂದ್ರ ಅನುಮೋದಿಸಿದೆ ಎಂದು ಸಿಎಂ ಯೋಗಿ ಹೇಳಿದರು.
ಇದನ್ನೂ ಓದಿ: ತಮ್ಮ ನಿವಾಸದಲ್ಲಿ ಯಜ್ಞ ಮಾಡಿಸಿ ಪುರಿ ಜಗನ್ನಾಥನಿಗೆ ನಮಿಸಿದ ಮಮತಾ ಬ್ಯಾನರ್ಜಿ
ಅಯೋಧ್ಯೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧ ದೇಶಗಳಲ್ಲಿ ಭಾರತ ಮೂಲದ ಜನರು ವಾಸಿಸುತ್ತಿದ್ದು, ಅವರು ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತಾರೆ. ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಅವರಿಗೆ ಬಹಳ ಅನುಕೂಲವಾಗುತ್ತದೆ ಎಂದು ಯೋಗಿ ತಿಳಿಸಿದರು.