ETV Bharat / bharat

ಸುಪ್ರೀಂಕೋರ್ಟ್​ಗೆ ಕೇಂದ್ರ ಅಪಮಾನ ಮಾಡಿದೆ... ಸುಗ್ರೀವಾಜ್ಞೆ ಪ್ರಶ್ನಿಸಿ ಅರ್ಜಿ ಸಲ್ಲಿಸುತ್ತೇವೆ: ಕೇಜ್ರಿವಾಲ್

ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ ರಚನೆ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

CM Arvind Kejriwal
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
author img

By

Published : May 20, 2023, 8:14 PM IST

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರಿಗಳ ಮೇಲಿನ ಹಿಡಿತಕ್ಕೆ ಸಂಬಂಧಿಸಿದ್ದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್​ ಆದ್ಮಿ ಪಕ್ಷದ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಕಿತ್ತಾಟ ಮತ್ತೊಂದು ಹಂತಕ್ಕೆ ತಲುಪಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರವೇ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಹೊಂದಿರಬೇಕೆಂದು ಇತ್ತೀಚೆಗೆ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಆದರೆ, ಇದೀಗ ನಾಗರಿಕ ಸೇವಾ ಪ್ರಾಧಿಕಾರವನ್ನು ರಚಿಸಲು ಕೇಂದ್ರವು ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿದೆ. ಇದಕ್ಕೆ ಅರವಿಂದ್ ಕೇಜ್ರಿವಾಲ್ ಸರ್ಕಾರ ತೀವ್ರವಾಗಿ ಖಂಡಿಸಿದ್ದು, ಆಕ್ರೋಶ ಹೊರ ಹಾಕಿದೆ.

ದೆಹಲಿಯಲ್ಲಿ ಐಎಎಸ್ ಮತ್ತು ಕೇಡರ್ ಅಧಿಕಾರಿಗಳ ವರ್ಗಾವಣೆ ಮತ್ತು ಶಿಸ್ತು ಕ್ರಮಗಳಿಗಾಗಿ ಕೇಂದ್ರ ಸರ್ಕಾರವು ನಾಗರಿಕ ಸೇವಾ ಪ್ರಾಧಿಕಾರ ರಚಿಸಲು ಶುಕ್ರವಾರ ಸುಗ್ರೀವಾಜ್ಞೆ ಪ್ರಕಟಿಸಿದೆ. ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂಮಿಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ ಸೇವೆಗಳ ನಿಯಂತ್ರಣವನ್ನು ಸುಪ್ರೀಂ ಕೋರ್ಟ್ ಹಸ್ತಾಂತರಿಸಿದ ಒಂದು ವಾರದ ನಂತರ ಸುಗ್ರೀವಾಜ್ಞೆ ಹೊರ ಬಂದಿದೆ. ಹೀಗಾಗಿ ಇದು ದೆಹಲಿ ಸರ್ಕಾರದ ಅಧಿಕಾರವನ್ನು ದುರ್ಬಲಗೊಳಿಸುವ ಕ್ರಮ ಎಂದು ಆಮ್​ ಆದ್ಮಿ ಪಕ್ಷ ಆರೋಪಿಸಿದೆ.

ಅಲ್ಲದೇ, ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನಾಗರಿಕ ಸೇವಾ ಪ್ರಾಧಿಕಾರ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ಸುಪ್ರೀಂಕೋರ್ಟ್ ಆದೇಶದ ನೇರ ತಿರಸ್ಕಾರವಾಗಿದೆ. ಇಷ್ಟೇ ಅಲ್ಲ, ದೇಶದ ಉನ್ನತ ನ್ಯಾಯಾಲಯಕ್ಕೆ ಮಾಡಿದ ಅಪಮಾನವಾಗಿದೆ ಎಂದು ದೂರಿದರು. ಜೊತೆಗೆ ಈ ಸುಗ್ರೀವಾಜ್ಞೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಎಂದು ಕೇಜ್ರಿವಾಲ್ ತಿಳಿಸಿದರು.

ಮುಂದುವರೆದು, ಕೇಂದ್ರ ಸರ್ಕಾರದ ಈ ನಿರ್ಧಾರವು ದೆಹಲಿಯ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಹುನ್ನಾರವಾಗಿದೆ. ಆದ್ದರಿಂದ ಸಂಸತ್ತಿನಲ್ಲಿ ಸುಗ್ರೀವಾಜ್ಞೆಯನ್ನು ವಿರೋಧಿಸುವಂತೆ ಕೋರಲು ಪ್ರತಿಪಕ್ಷಗಳ ನಾಯಕರನ್ನು ಸಂಪರ್ಕಿಸಲಾಗುವುದು. ಆಮ್ ಆದ್ಮಿ ಪಕ್ಷವು ಮನೆ ಮನೆಗೆ ತಲುಪಿ ಕೇಂದ್ರ ಸರ್ಕಾರದ ನಡೆ ಬಗ್ಗೆ ಪ್ರಚಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ ರಚನೆ ಕುರಿತು ಹೊರಡಿಸಿರುವ ಸುಗ್ರೀವಾಜ್ಞೆ ಪ್ರಕಾರ, ಈ ಪ್ರಾಧಿಕಾರದ ಅಧ್ಯಕ್ಷರು ದೆಹಲಿ ಮುಖ್ಯಮಂತ್ರಿ ಆಗಿರುತ್ತಾರೆ. ಜೊತೆಗೆ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಗೃಹ ಕಾರ್ಯದರ್ಶಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಆದರೆ, ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ ಲೆಫ್ಟಿನೆಂಟ್ ಗವರ್ನರ್ ತೆಗೆದುಕೊಳ್ಳುವ ತೀರ್ಮಾನವೇ ಅಂತಿಮವಾಗಿರುತ್ತದೆ.

2014ರಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರ ರಾಜಧಾನಿಯ ಆಡಳಿತದ ಮೇಲೆ ನಿಯಂತ್ರಣ ವಿಷಯವಾಗಿ ಕೇಂದ್ರ ಸರ್ಕಾರದೊಂದಿಗೆ ಕಿತ್ತಾಟಕ್ಕೆ ಸಾಕ್ಷಿಯಾಗಿದೆ. ಕೇಂದ್ರವು ಲಿಫ್ಟಿನೆಂಟ್​ ಗರ್ವನರ್​ ಮೂಲಕ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸುತ್ತದೆ ಎಂದು ಅರವಿಂದ್ ಕೇಜ್ರಿವಾಲ್ ಸರ್ಕಾರ ಆರೋಪಿಸುತ್ತಲೇ ಬಂದಿದೆ.

ಇದನ್ನೂ ಓದಿ: ದೆಹಲಿ ಸರ್ಕಾರ-ಕೇಂದ್ರದ ನಡುವಿನ 'ಪವರ್' ಫೈಟ್: ಸುಪ್ರೀಂ ಕೋರ್ಟ್​ ಮಹತ್ವದ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.