ETV Bharat / bharat

ತೈಲ ಸುಂಕವನ್ನು ಕೇಂದ್ರ ಸರ್ಕಾರ ಇಳಿಸಲಿ: ತಮಿಳುನಾಡು ಸಚಿವ ಒತ್ತಾಯ - Tamil Nadu Finance Minister urges center reduce on fuel oil tax

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್​ ಮೇಲಿನ ಸುಂಕವನ್ನು ಕಡಿಮೆ ಮಾಡಬೇಕು. ರಾಜ್ಯ ಸರ್ಕಾರಗಳಿಗೆ ಸೂಕ್ತ ಪ್ರಮಾಣದಲ್ಲಿ ಹಣದ ಹಂಚಿಕೆ ಮಾಡಬೇಕು ಎಂದು ತಮಿಳುನಾಡು ಸರ್ಕಾರ ಕೋರಿದೆ.

TN Finance Minister
ತಮಿಳುನಾಡು ಸಚಿವ ಒತ್ತಾಯ
author img

By

Published : Aug 3, 2022, 9:33 AM IST

ಚೆನ್ನೈ( ತಮಿಳುನಾಡು): ಕೇಂದ್ರ ಸರ್ಕಾರ ಕಳೆದ 7 ವರ್ಷಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 23.42 ರೂಪಾಯಿ ಮತ್ತು ಡೀಸೆಲ್ ಮೇಲೆ 28.23 ರೂಪಾಯಿ ತೆರಿಗೆಯನ್ನು ಹೆಚ್ಚಿಸಿದೆ. 2021ರ ನವೆಂಬರ್​ ಮತ್ತು ಮೇ 2022 ರಲ್ಲಿ ಪೆಟ್ರೋಲ್ ಮೇಲೆ 13 ರೂ. ಮತ್ತು ಡೀಸೆಲ್ ಮೇಲೆ 16 ರೂ. ಕಡಿತ ಮಾಡಿದಾಗ್ಯೂ 2014ರ ದರಕ್ಕಿಂತ ಹೆಚ್ಚಿವೆ. ಹೀಗಾಗಿ ಕೇಂದ್ರ ಸರ್ಕಾರ ತಾನು ವಿಧಿಸುವ ತೆರಿಗೆಯನ್ನು ಇನ್ನಷ್ಟು ಕಡಿಮೆ ಮಾಡುವ ಅವಶ್ಯಕತೆಯಿದೆ ಎಂದು ತಮಿಳುನಾಡು ಸರ್ಕಾರ ಮನವಿ ಮಾಡಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಬೆಲೆ ಏರಿಕೆ, ಜಿಎಸ್‌ಟಿ ದರ ಹೆಚ್ಚಳ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗಳ ಕುರಿತು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ತಮಿಳುನಾಡು ಹಣಕಾಸು ಸಚಿವ ಪಿಟಿಆರ್ ಪಳನಿವೇಲ್ ತ್ಯಾಗ ರಾಜನ್, ಕೇಂದ್ರ ನವೆಂಬರ್ 2021 ರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತನ್ನ ತೆರಿಗೆಯನ್ನು ಕಡಿಮೆಗೊಳಿಸಿತು.

ಅದಕ್ಕೂ ಮೊದಲೇ ತಮಿಳುನಾಡು ಸರ್ಕಾರ ಆಗಸ್ಟ್​​ನಲ್ಲೇ ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 3 ರೂಪಾಯಿಗಳಷ್ಟು ಕಡಿತಗೊಳಿಸಿದೆ" ಎಂದು ಅವರು ಹೇಳಿದರು. ಕಳೆದ 7 ವರ್ಷಗಳಲ್ಲಿ ಪೆಟ್ರೋಲ್ ಮೇಲಿನ ಕೇಂದ್ರದ ಸುಂಕಗಳು ಗಣನೀಯವಾಗಿ ಏರಿಕೆಯಾಗಿದೆ. ಅದರ ಆದಾಯವು ಹಲವಾರು ಲಕ್ಷ ಕೋಟಿಗಳಷ್ಟು ಹೆಚ್ಚಿದ್ದರೂ, ರಾಜ್ಯಗಳ ಆದಾಯದಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಮತ್ತು ಹೆಚ್ಚುವರಿ ಶುಲ್ಕವನ್ನು ಹೆಚ್ಚಿಸಿದೆ. ರಾಜ್ಯಗಳೊಂದಿಗೆ ಹಂಚಿಕೊಳ್ಳಬಹುದಾದ ಮೂಲ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ ಎಂದು ಅವರು ಟೀಕಿಸಿದರು.

ಓದಿ: ಪೆಲೋಸಿ ತೈವಾನ್​ ಪ್ರವಾಸ ಮತ್ತು ಚೀನಾ ರಣ ನೀತಿ... ಏನಿದು ವಿವಾದ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.