ನವದೆಹಲಿ : ರೆಸ್ಟೋರೆಂಟ್ ಮತ್ತು ಹೋಟೆಲ್‌ಗಳು ವಿಧಿಸುವ ಸೇವಾ ಶುಲ್ಕ ಗ್ರಾಹಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಹೀಗಾಗಿ, ಸೇವಾ ಶುಲ್ಕವನ್ನು ವಿಧಿಸಬಾರದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಸೂಚನೆ ನೀಡಿದ್ದು, ಈ ಕುರಿತು ಸಂವಿಧಾನಾತ್ಮಕವಾಗಿ ಕಾನೂನು ರೂಪಿಸಲಾಗುವುದು ಎಂದು ತಿಳಿಸಿದೆ.
ರೆಸ್ಟೊರೆಂಟ್‌ಗಳು ಕಡ್ಡಾಯವಾಗಿ ಸೇವಾ ಶುಲ್ಕವನ್ನು ವಿಧಿಸುತ್ತಿರುವ ಕುರಿತು ರಾಷ್ಟ್ರೀಯ ಗ್ರಾಹಕರ ಸಹಾಯವಾಣಿಗೆ ದೂರುಗಳು ಹೆಚ್ಚುತ್ತಿರುವುದರಿಂದ ಗ್ರಾಹಕ ವ್ಯವಹಾರಗಳ ಇಲಾಖೆ ( ಡಿಒಸಿಎ) ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಅವರು ಗುರುವಾರ ಸಭೆ ನಡೆಸಿ, ಈ ಆದೇಶ ಹೊರಡಿಸಿದ್ದಾರೆ. ಸಭೆಯಲ್ಲಿ ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಮತ್ತು ಫೆಡರೇಶನ್ ಆಫ್ ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (FHRAI), ಗ್ರಾಹಕ ಸಂಘಟನೆಗಳು ಸೇರಿದಂತೆ ಪ್ರಮುಖ ರೆಸ್ಟೋರೆಂಟ್ ಸಂಘಗಳು ಭಾಗವಹಿಸಿದ್ದವು.
ಸೇವಾ ಶುಲ್ಕವು ಗ್ರಾಹಕರ ಮೇಲೆ ನ್ಯಾಯಸಮ್ಮತವಲ್ಲದ ವೆಚ್ಚವನ್ನು ವಿಧಿಸುವುದಕ್ಕೆ ಸಮಾನವಾಗಿರುತ್ತದೆ. ಗ್ರಾಹಕ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಅನ್ಯಾಯದ ಮತ್ತು ನಿರ್ಬಂಧಿತ ವ್ಯಾಪಾರ ಅಭ್ಯಾಸವನ್ನು ರೂಪಿಸುತ್ತದೆ. ಇದು ಪ್ರತಿದಿನ ಲಕ್ಷಾಂತರ ಗ್ರಾಹಕರ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ, ಮಧ್ಯಸ್ಥಗಾರರಿಂದ ಕಟ್ಟುನಿಟ್ಟಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಇಲಾಖೆಯು ಶೀಘ್ರದಲ್ಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ವಿಧಿಸುವ ಸೇವಾಶುಲ್ಕ ಕಾನೂನುಬಾಹಿರ ಎಂದು ತಿಳಿಸಿದೆ.
ಇದನ್ನೂ ಓದಿ: ಪ್ರತಿ ಮಸೀದಿಯಲ್ಲಿ ಶಿವಲಿಂಗ ಏಕೆ ಹುಡುಕಬೇಕು?.. ದಿನವೂ ಹೊಸ ವಿವಾದ ಪ್ರಾರಂಭಿಸುವ ಅಗತ್ಯವಿಲ್ಲ.. ಮೋಹನ್ ಭಾಗವತ್