ETV Bharat / bharat

ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಕೋಮುವಾದ ಹರಡುವ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ; ರಾಹುಲ್ ಗಾಂಧಿ

ಬರುವ ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ.

Centre used NEP 2020 as weapon to communalise
ಕೇಂದ್ರ ಸರ್ಕಾರ ಶಿಕ್ಷಣ ನೀತಿಯನ್ನು ಕೋಮುವಾದ ಹರಡುವ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ
author img

By

Published : Feb 28, 2021, 3:24 PM IST

ತಿರುನೆಲ್ವೇಲಿ (ತಮಿಳುನಾಡು): ಶಿಕ್ಷಕ ಹಾಗೂ ವಿದ್ಯಾರ್ಥಿ ಸಮುದಾಯದಗಳೊಂದಿಗೆ ಚರ್ಚಿಸದೆ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿ-2020ನ್ನು ಜಾರಿಗೊಳಿಸಿದೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೊಸ ಶಿಕ್ಷಣ ನೀತಿಯ ಮೂಲಕ ದೇಶದಲ್ಲಿ ನಿರ್ದಿಷ್ಟ ಧರ್ಮದ ನೀತಿಗಳನ್ನು ಹೇರಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

ಇಲ್ಲಿನ ಸೇಂಟ್ ಝೇವಿಯರ್ಸ್​ ಕಾಲೇಜಿನಲ್ಲಿ ಉಪನ್ಯಾಸಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

"ಶಿಕ್ಷಣ ವ್ಯವಸ್ಥೆಯು ವಿದ್ಯಾರ್ಥಿಗಳಿಗಾಗಿ ರೂಪಿತವಾಗಿರಬೇಕು ಹಾಗೂ ಅದನ್ನು ಶಿಕ್ಷಕರು ಮುನ್ನಡೆಸಬೇಕು. ಯಾವುದೇ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕಾದರೆ ಅದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಚರ್ಚೆಯಿಂದ ಒಮ್ಮತವಾಗಿ ಮೂಡಿಬರಬೇಕು. ಆದರೆ ಹೀಗೆ ಆಗದಿರುವುದು ನಮ್ಮ ದುರಾದೃಷ್ಟ." ಎಂದು ರಾಹುಲ್ ಹೇಳಿದರು.

ಇಷ್ಟಾದರೂ ಹೊಸ ಶಿಕ್ಷಣ ನೀತಿಯು ಕೆಲ ಸಕಾರಾತ್ಮಕ ಅಂಶಗಳನ್ನು ಒಳಗೊಂಡಿದೆ ಎಂದು ರಾಹುಲ್ ಶ್ಲಾಘಿಸಿದರು. ಆದರೆ ಹೊಸ ಶಿಕ್ಷಣ ನೀತಿಯ ಹೆಸರಲ್ಲಿ ಕೇಂದ್ರ ಕೋಮುವಾದ ಸೃಷ್ಟಿಸುತ್ತಿದೆ ಎಂದೂ ಆರೋಪಿಸಿದರು.

ತಮ್ಮ ಪಕ್ಷದ ಸರ್ಕಾರ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದಲ್ಲಿ ಹೆಚ್ಚು ಸಂಖ್ಯೆಯ ಶೈಕ್ಷಣಿಕ ಸ್ಕಾಲರಶಿಪ್​ಗಳನ್ನು ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಬರುವ ಏಪ್ರಿಲ್ 6 ರಂದು ತಮಿಳುನಾಡು ವಿಧಾನಸಭೆಯ 234 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಎನ್​ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ.

ಓದಿ: ರಾಷ್ಟ್ರೀಯ ಶಿಕ್ಷಣ ನೀತಿ ಭಾರತವನ್ನು ಜಾಗತಿಕ ಜ್ಞಾನ ಬಂಡವಾಳ ರಾಷ್ಟ್ರವಾಗಿಸುತ್ತೆ: ಗೋಯಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.