ಗ್ವಾಲಿಯರ್ (ಮಧ್ಯಪ್ರದೇಶ): ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸರ್ಕಾರ ತಿದ್ದುಪಡಿ ರೂಪದಲ್ಲಿ ಕೃಷಿ ಕಾನೂನುಗಳನ್ನು ಮರುಪರಿಚಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ.
-
#WATCH | "I never said that," said Union Agriculture Minister Narendra Singh Tomar on his reported remarks alluding that Govt will again bring farm laws (25.12) pic.twitter.com/kHNt9xrYXF
— ANI (@ANI) December 26, 2021 " class="align-text-top noRightClick twitterSection" data="
">#WATCH | "I never said that," said Union Agriculture Minister Narendra Singh Tomar on his reported remarks alluding that Govt will again bring farm laws (25.12) pic.twitter.com/kHNt9xrYXF
— ANI (@ANI) December 26, 2021#WATCH | "I never said that," said Union Agriculture Minister Narendra Singh Tomar on his reported remarks alluding that Govt will again bring farm laws (25.12) pic.twitter.com/kHNt9xrYXF
— ANI (@ANI) December 26, 2021
ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ ಬಗ್ಗೆ ಮಾತನಾಡುವಾಗ, ಕೇಂದ್ರ ಸರ್ಕಾರ ದೂರದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ಕಾರಣಾಂತರಗಳಿಂದ ಅವುಗಳನ್ನು ಹಿಂಪಡೆದಿದೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸದಾ ಕ್ರಿಯಾಶೀಲವಾಗಿರುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟರು.
ಸ್ವಾತಂತ್ರ್ಯ ಬಂದು 70 ವರ್ಷಗಳ ನಂತರ ಕೃಷಿ ಕ್ಷೇತ್ರದ ಸುಧಾರಣೆಗಾಗಿ ಒಳ್ಳೆಯ ಕೃಷಿ ಕಾಯ್ದೆಗಳನ್ನು ತರಲಾಗಿತ್ತು. ಆದರೂ ಅವುಗಳಿಗೆ ವಿರೋಧ ವ್ಯಕ್ತವಾಯಿತು. ಇದರಿಂದ ಸರ್ಕಾರ ಬೇಸರಗೊಂಡಿಲ್ಲ. ಸರ್ಕಾರ ಒಂದು ಹೆಜ್ಜೆ ಹಿಂದೆ ಇರಿಸಿದೆ. ಆದರೆ ಸರ್ಕಾರ ಖಂಡಿತಾ ಸುಧಾರಣೆಯತ್ತ ಸಾಗಲಿದೆ. ರೈತರು ಈ ದೇಶದ ಬೆನ್ನೆಲುಬು. ಈ ಬೆನ್ನೆಲುಬು ಗಟ್ಟಿಯಾಗಿದ್ದರೆ ದೇಶವೂ ಸಮರ್ಥವಾಗಿ ಮುನ್ನಡೆಯಲಿದೆ ಎಂದು ಹೇಳಿದರು.
ತೋಮರ್ ಅವರ ಹೇಳಿಕೆ ಉಲ್ಲೇಖಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಕೇಂದ್ರ ಸರ್ಕಾರ ರೈತ ವಿರೋಧಿಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಷಡ್ಯಂತ್ರ ರೂಪಿಸಿದೆ. ಸದ್ಯದಲ್ಲೇ ಐದು ರಾಜ್ಯಗಳಿಗೆ ನಡೆಯುವ ವಿಧಾನಸಭಾ ಚುನಾವಣೆಯ ನಂತರ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತಿಸಿದೆ ಮತ್ತು ಬಂಡವಾಳಶಾಹಿಗಳ ಒತ್ತಡದಿಂದ ಇದನ್ನು ಮಾಡುತ್ತಿದೆ ಎಂದು ಆರೋಪಿಸಿದ್ದರು.
ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಪ್ರಬಲ ವಿರೋಧ ಅರಿತು ಪ್ರಧಾನಿ ನರೇಂದ್ರ ಮೋದಿ ನ.19ರಂದು ಕ್ಷಮೆಯಾಚಿಸಿ ಮೂರು ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದರು.
ಇದನ್ನೂ ಓದಿ: ಮನ್ ಕಿ ಬಾತ್: ಇಂದು ದೇಶದ ಜನತೆಯನ್ನುದ್ದೇಶಿಸಿ ಮೋದಿ ಮನದ ಮಾತು