ಚಮೋಲಿ (ಉತ್ತರಾಖಂಡ): ಫೆಬ್ರವರಿ 7ರಂದು ಉತ್ತರಾಖಂಡದ ಚಮೋಲಿಯಲ್ಲಿ ಹಿಮ ಸ್ಫೋಟದಿಂದ ಉಂಟಾದ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.
ಜೋಶಿಮಠದ ತಪೋವನ ಸುರಂಗ, ರೇನಿ ಗ್ರಾಮ ಸೇರಿ ಚಮೋಲಿಯಲ್ಲಿ ಈವರೆಗೆ ಒಟ್ಟು 62 ಮೃತದೇಹಗಳು ಹಾಗೂ ಮಾನವ ದೇಹದ 28 ಅವಶೇಷಗಳು ಪತ್ತೆಯಾಗಿವೆ ಎಂದು ಉತ್ತರಾಖಂಡ ಡಿಜಿಪಿ ತಿಳಿಸಿದ್ದಾರೆ.
ಇದನ್ನೂ ಓದಿ: ಮರಣದಂಡನೆಗೆ ಒಳಗಾಗಲಿರುವ ಸ್ವತಂತ್ರ ಭಾರತದ ಮೊದಲ ಮಹಿಳೆ.. ರಾಷ್ಟ್ರಪತಿ ಬಳಿ ಮಗನ ಮನವಿ
ಸತತ 13ನೇ ದಿನವೂ ಕಾರ್ಯಾಚರಣೆ ಮುಂದುವರೆದಿದ್ದು, ಐಟಿಬಿಪಿ, ಎನ್ಡಿಆರ್ಎಫ್, ಎಸ್ಡಿಆರ್ಎಫ್ ತಂಡಗಳು ವಿವಿಧ ಇಲಾಖೆಗಳ ಇಂಜಿನಿಯರ್‌ಗಳು, ಅಧಿಕಾರಿಗಳು, ಭೂವಿಜ್ಞಾನಿಗಳು, ವಿಜ್ಞಾನಿಗಳು ಸೇರಿ ಒಟ್ಟು 325ಕ್ಕೂ ಹೆಚ್ಚು ಸಿಬ್ಬಂದಿ ನಾಪತ್ತೆಯಾಗಿರುವವರಿಗಾಗಿ ಹುಡುಕುತ್ತಿದ್ದಾರೆ.