ನಾಸಿಕ್ (ಮಹಾರಾಷ್ಟ್ರ): ಆಮ್ಲಜನಕ ಸೋರಿಕೆಯಿಂದಾಗಿ ಡಾ. ಝಾಕೀರ್ ಹುಸೇನ್ ಆಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ ಒಂದು ದಿನದ ನಂತರ, ಭದ್ರಾಕಲಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ನಾಸಿಕ್ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಗುರುವಾರ ಆರೋಪಿಯ ನಿರ್ಲಕ್ಷ್ಯದಿಂದ ನರಹತ್ಯೆ ನಡೆದಿರುವ ಬಗ್ಗೆ ದೂರು ದಾಖಲಿಸಿದ್ದಾರೆ.
ಘಟನೆಯ ತನಿಖೆಗಾಗಿ ನಾಸಿಕ್ ವಿಭಾಗೀಯ ಆಯುಕ್ತ ರಾಧಾಕೃಷ್ಣ ಗೇಮ್ ನೇತೃತ್ವದ ಏಳು ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದು ಆರೋಗ್ಯ ಸಚಿವ ರಾಜೇಶ್ ತೋಪೆ ತಿಳಿಸಿದ್ದಾರೆ.