ಚೆನ್ನೈ( ತಮಿಳುನಾಡು): ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 800 ಗ್ರಾಂ ಚಿನ್ನವನ್ನು ಚೆನ್ನೈ ಅನ್ನಾ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಕಳ್ಳಸಾಗಣೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಸಾಗಾಣಿಕೆದಾರ ಮತ್ತು ರಿಸೀವರ್ ಇಬ್ಬರನ್ನೂ ಬಂಧಿಸಲಾಗಿದೆ.
ಮಾಹಿತಿ ಮೇರೆಗೆ ತಪಾಸಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳೂ ಎಕ್ಸಿಟ್ ಪಾಯಿಂಗ್ಬಳಿ ಅನುಮಾನಾಸ್ಪದವಾಗಿ ಕಂಡ ವ್ಯಕ್ತಿಯನ್ನು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ 90 ಲಕ್ಷ ರೂ. ಬೆಲೆಬಾಳುವ 1 ಕೆಜಿ 800 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿ ಸಾಗಾಣಿಕೆದಾರನ ಮೂಲಕ ಚಿನ್ನವನ್ನು ತೆಗೆದುಕೊಳ್ಳಲು ಬಂದ ರಿಸೀವರ್ನನ್ನು ಬಲೆಗೆ ಬೀಳಿಸಲಾಗಿದೆ. ಆರೋಪಿಯನ್ನು ಚೆನ್ನೈನ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ.
ಆರೋಪಿ ಎರಡು ಪ್ಯಾಕೆಟ್‌ಗಳಲ್ಲಿ ಚಿನ್ನದ ಪೇಸ್ಟ್ ಅನ್ನು ಎರಡೂ ಕಾಲುಗಳ ಹಿಂಭಾಗದಲ್ಲಿ ಇಟ್ಟುಕೊಂಡು, ದುಬೈನಿಂದ ಚೆನ್ನೈಗೆ ತಂದಿದ್ದ. ಚಿನ್ನವನ್ನು ವಿಮಾನ ನಿಲ್ದಾಣದ ಹೊರಗಿದ್ದ ಅಪರಿಚಿತ ವ್ಯಕ್ತಿಗೆ ತಲುಪಿಸಲು ಹೊರಟಿದ್ದಾಗ ಆರೋಪಿಗಳು ವಿಚಾರಣೆಯಲ್ಲಿ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು ವಿಚಾರಣೆ ಮುಂದುವರೆದಿದೆ.