ETV Bharat / bharat

ಪತ್ನಿ ನೆರವಿನಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ದೇವಮಾನವ: ಬಂಧನ​​ - ಚೆನ್ನೈ ದೇವಮಾನವ ಸತ್ಯನಾರಾಯಣನ್ ಮತ್ತು ಆತನ ಪತ್ನಿ ಬಂಧನ

ಪತ್ನಿಯ ನೆರವಿನಿಂದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಪತ್ನಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

godman Sathiya Narayanan and his wife arrest
ದೇವಮಾನವನ ಸತ್ಯನಾರಾಯಣನ್ ಮತ್ತು ಆತನ ಪತ್ನಿ ಬಂಧನ
author img

By

Published : Dec 20, 2021, 10:55 PM IST

Updated : Dec 21, 2021, 1:26 PM IST

ಚೆನ್ನೈ: ಪತ್ನಿಯ ನೆರವಿನಿಂದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಸ್ವಯಂ ಘೋಷಿತ ದೇವಮಾನವ ಮತ್ತು ಆತನ ಪತ್ನಿಯನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸತ್ಯನಾರಾಯಣನ್ ಮತ್ತು ಆತನ ಪತ್ನಿ ಪುಷ್ಪಲತಾ ನಗರದ ‘ಶಿರಡಿಪುರಂ ಸರ್ವ ಶಕ್ತಿ ಪೀಠದ ಸಾಯಿಬಾಬಾ ಕೊಯಿಲ್’ ಎಂಬ ದೇವಸ್ಥಾನ ಹೊಂದಿದ್ದಾರೆ. ಪುಷ್ಪಲತಾ ಬಾಲಕಿ ಮೇಲೆ ಅತ್ಯಾಚಾರ ಮಾಡಲು ಪತಿ ಸತ್ಯ ನಾರಾಯಣನ್‌ಗೆ ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

godman Sathiya Narayanan and his wife arrest
ದೇವಮಾನವನ ಸತ್ಯನಾರಾಯಣನ್ ಅರೆಸ್ಟ್​

12ನೇ ತರಗತಿ ಓದುತ್ತಿದ್ದಾಗ ಬಾಲಕಿಯ ಸಂಬಂಧಿಕರು ಆಕೆಯನ್ನು ಆಶ್ರಮಕ್ಕೆ ಕರೆದೊಯ್ದಿದ್ದರು. ಆಗ ಪವಿತ್ರ ಬೂದಿಯನ್ನು ನೀಡಲು ಬಾಲಕಿಯನ್ನು ಕೋಣೆಯೊಳಗೆ ಕರೆದು ಪುಷ್ಪಲತಾ, ಕುಡಿಯಲು ಜ್ಯೂಸ್ ಕೊಟ್ಟಿದ್ದಾಳೆ. ಸುಮಾರು ಎರಡು ಗಂಟೆಗಳ ನಂತರ ಬಾಲಕಿಗೆ ಪ್ರಜ್ಞೆ ಬಂದಾಗ ತನ್ನ ಮೇಲೆ ಅತ್ಯಾಚಾರ ಆಗಿರುವ ವಿಚಾರ ತಿಳಿದಿದೆ.

ಅಷ್ಟೇ ಅಲ್ಲದೆ ಸಂತ್ರಸ್ತೆಯ ಮೇಲೆ ಪಾಪದ ಹೊರೆ ಇದೆ ಎಂದು ಹೇಳಿದ್ದ ಸತ್ಯನಾರಾಯಣನ್, ಆಕೆಯನ್ನು ಅದರಿಂದ ಮುಕ್ತಗೊಳಿಸಬೇಕು ಎಂದು ಹೇಳಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಳಿಕ ಬಾಲಕಿಗೆ ಫೋಟೋಗಳನ್ನು ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಇದಾದ ಬಳಿಕ 2018 ರಲ್ಲಿ ಸಂತ್ರಸ್ತೆ ವಿವಾಹವಾಗಿ ತನ್ನ ಪತಿಯೊಂದಿಗೆ ವಿದೇಶಕ್ಕೆ ತೆರಳಿದ್ದರು. ನಂತರ 2020ರಲ್ಲಿ ಮತ್ತೆ ನನ್ನ ಆಟ ಆರಂಭಿಸಿದ ಸತ್ಯ ನಾರಾಯಣನ್​​​, ಮಹಿಳೆಯನ್ನು ಪತ್ತೆ ಹಚ್ಚಿ ಮತ್ತೆ ಕರೆ ಮಾಡಿ ಆಶ್ರಮಕ್ಕೆ ಬರುವಂತೆ ಒತ್ತಾಯಿಸಿದ್ದಾನೆ. ಬರದಿದ್ದರೆ ಪತಿಗೆ ಫೋಟೋಗಳನ್ನು ಕಳುಹಿಸುವುದಾಗಿ ಬೆದರಿಕೆ ಹಾಕಿ ಮಹಿಳೆಯನ್ನು ಕರೆಸಿಕೊಂಡು ಹಲವಾರು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 2020 ರಲ್ಲಿ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ ಎಂದು ತಿಳಿದುಕೊಂಡ ದೇವಮಾನವ ಮತ್ತು ಆತನ ಹೆಂಡತಿ ಗರ್ಭಪಾತ ಮಾಡಿಸುವಂತೆ ಬೆದರಿಕೆ ಹಾಕಿದ್ದಾನೆ. ಆದರೆ, ಇದಕ್ಕೆ ಒಪ್ಪದ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಳು. ನಂತರ ಈ ವರ್ಷದ ಜನವರಿಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಳು.

ಸಂತ್ರಸ್ತೆಯ ಪತಿ ಕುಟುಂಬವನ್ನು ಭೇಟಿ ಮಾಡಿ ನವೆಂಬರ್‌ನಲ್ಲಿ ಮತ್ತೆ ವಿದೇಶಕ್ಕೆ ಮರಳಿದ್ದರು. ಈ ಹಿನ್ನೆಲೆಯಲ್ಲಿ ಕಾಮುಕ ಸತ್ಯನಾರಾಯಣನ್ ಮತ್ತೆ ಸಂತ್ರಸ್ತೆಗೆ ತನ್ನನ್ನು ಭೇಟಿ ಮಾಡುವಂತೆ ಒತ್ತಾಯಿಸಿದ್ದ. ಈ ಬಾರಿ ಸಂತ್ರಸ್ತೆ ಪತಿಗೆ ಮಾಹಿತಿ ನೀಡಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸತ್ಯನಾರಾಯಣನ್ ಮತ್ತು ಆತನ ಪತ್ನಿಯನ್ನು ಬಂಧಿಸಿದ್ದಾರೆ.

Last Updated : Dec 21, 2021, 1:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.