ಧಾರವಾಡ: ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆಯಾಗಿದೆ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರಿಕೆ ಮಾಡಲಾಗುತ್ತಿದ್ದು, ಮೂತ್ರಕೋಶ ಸಮಸ್ಯೆ ಸುಧಾರಣೆಯಾಗಿದೆ. ಡಯಾಲಿಸಿಸ್‌ಗೆ ಹೋಗುವ ಅಗತ್ಯವಿಲ್ಲ ಎಂದು ಕಣವಿ ಆರೋಗ್ಯದ ಬಗ್ಗೆ ಬುಲೆಟಿನ್ನಲ್ಲಿ ಮಾಹಿತಿ ನೀಡಲಾಗಿದೆ.
ಕಳೆದು ಒಂದು ವಾರದಿಂದ ಚೆನ್ನವೀರ ಕಣವಿ ಅವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದಾಗ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಕಣವಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಈಗಾಗಲೇ ಪ್ರಕಟಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ