ಕೊಚ್ಚಿ (ಕೇರಳ): ಭಾರತೀಯ ನೌಕಾಪಡೆಯ ಚೇತಕ್ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಅಧಿಕಾರಿಯೊಬ್ಬರು ಸಾವನ್ನಪ್ಪಿ, ಇಬ್ಬರು ಗಾಯಗೊಂಡಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಇಲ್ಲಿನ ಐಎನ್‌ಎಸ್ ಗರುಡಾ ರನ್‌ವೇಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಈ ದುರಂತ ಸಂಭವಿಸಿದೆ.
-
Adm R Hari Kumar #CNS & all personnel of #IndianNavy mourn the loss of life & pay tribute to Yogendra Singh, LAM who lost his life in the unfortunate accident at Kochi and extend heartfelt condolences to the bereaved family. https://t.co/83ZmXbsuqc pic.twitter.com/m9yyDM4JQM
— SpokespersonNavy (@indiannavy) November 4, 2023 " class="align-text-top noRightClick twitterSection" data="
">Adm R Hari Kumar #CNS & all personnel of #IndianNavy mourn the loss of life & pay tribute to Yogendra Singh, LAM who lost his life in the unfortunate accident at Kochi and extend heartfelt condolences to the bereaved family. https://t.co/83ZmXbsuqc pic.twitter.com/m9yyDM4JQM
— SpokespersonNavy (@indiannavy) November 4, 2023Adm R Hari Kumar #CNS & all personnel of #IndianNavy mourn the loss of life & pay tribute to Yogendra Singh, LAM who lost his life in the unfortunate accident at Kochi and extend heartfelt condolences to the bereaved family. https://t.co/83ZmXbsuqc pic.twitter.com/m9yyDM4JQM
— SpokespersonNavy (@indiannavy) November 4, 2023
ಏಳು ಮಂದಿ ಕೂರಬಹುದಾದ ಚೇತಕ್ ಹೆಲಿಕಾಪ್ಟರ್‌ನಲ್ಲಿ ಈ ಘಟನೆ ವೇಳೆ ಪೈಲಟ್ ಸೇರಿ ಇಬ್ಬರು ಇದ್ದರು. ಇಂದು ಮಧ್ಯಾಹ್ನ 2.30ರ ಸುಮಾರಿಗೆ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ಸಮಯದಲ್ಲಿ ಹೆಲಿಕಾಪ್ಟರ್ ಹಾರಾಟ ರದ್ದು ಪಡಿಸುವಾಗ ರನ್‌ವೇಯಲ್ಲಿ ಪತನಗೊಂಡಿದೆ. ಈ ಸಂದರ್ಭದಲ್ಲಿ ರನ್‌ವೇಯಲ್ಲಿ ನಿಂತಿದ್ದಾಗ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಮಧ್ಯಪ್ರದೇಶದ ಮೂಲದ ನಾವಿಕ ಯೋಗೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಇವರು ಪ್ರಮುಖ ಏರ್‌ಮನ್ ಆಗಿದ್ದರು. ಈ ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ವಿಷಯ ತಿಳಿದು ನೌಕಾಪಡೆಯ ಅಧಿಕಾರಿಗಳು ಮತ್ತು ಕೊಚ್ಚಿ ಬಂದರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಘಟನೆ ಕುರಿತು ತನಿಖೆ ಮಾಡಲು ನೌಕಾಪಡೆ ಆದೇಶಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನೌಕಾಪಡೆ, ಕೊಚ್ಚಿಯ ಐಎನ್‌ಎಸ್ ಗರುಡಾದಲ್ಲಿ ನಿರ್ವಹಣಾ ಟ್ಯಾಕ್ಸಿ ತಪಾಸಣೆಯ ವೇಳೆ ಇಂದು ಚೇತಕ್ ಹೆಲಿಕಾಪ್ಟರ್ ನೆಲಕ್ಕೆ ಅಪ್ಪಳಿಸಿ ಅಪಘಾತಕ್ಕೀಡಾಗಿದೆ. ಇದರ ಪರಿಣಾಮವಾಗಿ ಸಿಬ್ಬಂದಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಈ ಅಪಘಾತದ ಕಾರಣವನ್ನು ತನಿಖೆ ಮಾಡಲು ತನಿಖಾ ಮಂಡಳಿಗೆ ಆದೇಶಿಸಲಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: ಕೇರಳದ ಪ್ರಸಿದ್ಧ ಪದ್ಮನಾಭ ಸ್ವಾಮಿ ದೇವಸ್ಥಾನದ ಮೇಲೆ ಹೆಲಿಕಾಪ್ಟರ್ ಹಾರಾಟ ನಿರ್ಬಂಧಕ್ಕೆ ಶಿಫಾರಸು
ಭೋಪಾಲ್‌ನಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಮಧ್ಯಪ್ರದೇಶ ರಾಜಧಾನಿ ಭೋಪಾಲ್‌ನಲ್ಲಿ ಅ.1ರಂದು ವಾಯುಪಡೆ ಸುಧಾರಿತು ಲಘು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿತ್ತು. ಈ ಘಟನೆ ನಡೆದಾಗ ಹೆಲಿಕಾಪ್ಟರ್‌ನಲ್ಲಿದ್ದ ಪೈಲಟ್ ಸೇರಿ ಆರು ಮಂದಿ ಸೇನಾ ಸಿಬ್ಬಂದಿ ಸುರಕ್ಷಿತವಾಗಿ ಪಾರಾಗಿದ್ದರು.
ಅಂದು ಬೆಳಗ್ಗೆ 8.45ರ ಸುಮಾರಿಗೆ ಭೋಪಾಲ್‌ನಿಂದ ಝಾನ್ಸಿಗೆ ತೆರಳುತ್ತಿದ್ದಾಗ ತಾಂತ್ರಿಕ ದೋಷದಿಂದಾಗಿ ಬೆರಾಸಿಯಾದ ಡುಂಗರಿಯಾ ಅಣೆಕಟ್ಟೆ ಬಳಿಯ ಗದ್ದೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿತ್ತು. ಈ ಘಟನೆ ವಿಷಯ ತಿಳಿದ ಸೇನಾಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಇದೇ ವರ್ಷದ ಮೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಹಾರ್ಡ್ ಲ್ಯಾಂಡಿಂಗ್ ಮಾಡಿತ್ತು. ಇದರಿಂದ ಓರ್ವ ವ್ಯಕ್ತಿಯನ್ನು ಮೃತಪಟ್ಟಿದ್ದರು. ಅಲ್ಲದೇ, ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದರು. ಅದಕ್ಕೂ ಮೊದಲು ಮಾರ್ಚ್‌ನಲ್ಲಿ ಅರುಣಾಚಲ ಪ್ರದೇಶದಲ್ಲಿ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡ ನಂತರ ಪೈಲಟ್ ಮತ್ತು ಸಹ ಪೈಲಟ್ ಸಾವನ್ನಪ್ಪಿದ್ದ ಘಟನೆ ವರದಿಯಾಗಿತ್ತು.
ಇದನ್ನೂ ಓದಿ: ಭೋಪಾಲ್: ಜಮೀನಿನಲ್ಲಿ ವಾಯುಸೇನೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ; ಸೇನಾ ಸಿಬ್ಬಂದಿ ಸುರಕ್ಷಿತ