ಛತ್ತೀಸ್‌ಗಢ: ಮೇ 10 ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಹೋಂ ಡೆಲಿವರಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಅಬಕಾರಿ ಸಚಿವ ಕವಾಸಿ ಲಖ್ಮಾ ತಿಳಿಸಿದ್ದಾರೆ.
ಲಾಕ್ಡೌನ್ನಿಂದ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ತುಂಬುವ ಕಾರಣಕ್ಕೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಲಾಕ್‌ಡೌನ್ ಕಾರಣದಿಂದ ಮದ್ಯ ಮಾರಾಟ ಸ್ಥಗಿತಗೊಂಡಿರುವುದರಿಂದ ಸರ್ಕಾರಕ್ಕೆ ಭಾರೀ ಆರ್ಥಿಕ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗ್ತಿದೆ.
ಇದನ್ನೂ ಓದಿ : ಖುದ್ದು ರಸ್ತೆಗಳಿದು ನೈಟ್ ಕರ್ಫ್ಯೂ ಪರಿಶೀಲಿಸಿದ ತ್ರಿಪುರ ಸಿಎಂ
ಕೋವಿಡ್ ಪ್ರಕರಣಗಳು ಕಡಿಮೆಯಿರುವ ಗ್ರೀನ್ ಝೋನ್ಗಳಲ್ಲಿ ಮದ್ಯ ಹೋಂ ಡೆಲಿವರಿಗೆ ಸರ್ಕಾರ ಪ್ರತ್ಯೇಕ ಪೋರ್ಟಲ್ ತೆರೆದಿದೆ. ಈ ಮೂಲಕ ಜನ ಗುಂಪು ಸೇರುವುದನ್ನು ತಡೆಯುವ ಉದ್ದೇಶ ಸರ್ಕಾರದ್ದಾಗಿದೆ.