ETV Bharat / bharat

ಹೈದರಾಬಾದ್ ಮೆಟ್ರೋ ನಿಲ್ದಾಣದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಛತ್ತೀಸ್‌ಗಢದ ಮೂಲದ 45 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್​ನಲ್ಲಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Chhattisgarh man jumps to death from Hyderabad Metro station
ಹೈದರಾಬಾದ್ ಮೆಟ್ರೋ ನಿಲ್ದಾಣದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
author img

By

Published : Oct 1, 2021, 1:33 PM IST

ಹೈದರಾಬಾದ್: ಛತ್ತೀಸ್‌ಗಢದ ಮೂಲದ 45 ವರ್ಷದ ವ್ಯಕ್ತಿಯೊಬ್ಬ ಹೈದರಾಬಾದ್​ನಲ್ಲಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೈದರಾಬಾದ್​ ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರುವಾರ ರಾತ್ರಿ ದಿಲ್ಸುಖ್​ನಗರ ಮೆಟ್ರೋ ನಿಲ್ದಾಣದ ಮೊದಲ ಮಹಡಿಯಿಂದ ಜಿಗಿದಿದ್ದು, ಆತನಿಗೆ ಗಂಭೀರ ಗಾಯಗಳಾಗಿದ್ದವು. ಆತನನ್ನು ತಕ್ಷಣ ಒಸ್ಮಾನಿಯಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ಛತ್ತೀಸ್​ಗಢದ ದಾಂತೇವಾಡ ಜಿಲ್ಲೆಯ ಕೋವಕೊಂಡ ನಿವಾಸಿ ಭೀಮಾ ಎಂದು ಗುರುತಿಸಲಾಗಿದೆ. ಆತ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಪೊಲೀಸರು ಶಂಕಿಸಿದ್ದು, ಆತನ ಮೆಟ್ರೋ ನಿಲ್ದಾಣದಲ್ಲಿ ಅಲೆದಾಡುತ್ತಿದ್ದನು ಎಂದು ತಿಳಿದು ಬಂದಿದೆ. ಮಲಕ್​ಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಹೊಳೆ ದಾಟುವ ವೇಳೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗ: ವಿಡಿಯೋ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.