ದಾಂತೇವಾಡ (ಛತ್ತೀಸ್‌ಗಢ): ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ದಾಂತೇವಾಡದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರಾಜಧಾನಿ ರಾಯ್‌ಪುರಕ್ಕೆ ಗಾಯಾಳು ಯೋಧರನ್ನು ಏರ್ಲಿಫ್ಟ್ ಮಾಡಲಾಗಿದೆ.
ಇಲ್ಲಿನ ಅರನ್‌ಪುರ ಅರಣ್ಯದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಬಸ್ತಾರ್ ಫೈಟರ್ಸ್ನ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ರಸ್ತೆ ಮಾರ್ಗವಾಗಿ ದಾಂತೇವಾಡಕ್ಕೆ ಸಾಗಿಸಲಾಗಿತು. ಬಳಿಕ ಹೆಲಿಕಾಪ್ಟರ್ ಮೂಲಕ ರಾಯ್‌ಪುರಕ್ಕೆ ರವಾನಿಸಲಾಗಿದೆ ಎಂದು ದಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಕೆ.ಬರ್ಮನ್ ತಿಳಿಸಿದ್ದಾರೆ.
ಇದನ್ನೂ ಓದಿ: ರಜೌರಿಯಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ : ಇಬ್ಬರು ಯೋಧರು ಹುತಾತ್ಮ