ರಾಯ್ಪುರ (ಛತ್ತೀಸ್‌ಗಢ): ಕೊಂಡಗಾಂವ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಥಳದಿಂದ ಬಂದೂಕುಗಳು ಮತ್ತು ಸ್ಫೋಟಕಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಭಂಡರಪಾಲ್ ಗ್ರಾಮದ ಸಮೀಪ ಇರುವ ದಟ್ಟ ಕಾಡಿನಲ್ಲಿ ಮಧ್ಯಾಹ್ನ 12:30ರ ಸುಮಾರಿಗೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಪೊಲೀಸರು ಹೋಗಿದ್ದಾಗ ಘಟನೆ ಸಂಭವಿಸಿದೆ.
ಇನ್ನೂ ಕೆಲವು ನಕ್ಸಲರು ಗಾಯಗೊಂಡಿರಬಹುದು ಎಂದು ಶಂಕಿಸಲಾಗಿದ್ದು, ಶೋಧ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ವಿಶೇಷ ಕಾರ್ಯಪಡೆ ಮತ್ತು ಡಿಆರ್‌ಜಿ ಯಿಂದ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.