ETV Bharat / bharat

ಲಡಾಖ್​​​​ ಕುರಿತ ಚರ್ಚೆ ಬಳಿಕ ಸಂಸತ್​​ನಿಂದ ನಿರ್ಗಮಿಸಿದ ಬಿಪಿನ್ ರಾವತ್​, ನರವಣೆ - ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾನೆ

ಲಡಾಖ್ ಗಡಿಯಲ್ಲಿ ಚೀನಾ ಉದ್ಧಟತನದ ವಿರುದ್ಧ ಸದನದಲ್ಲಿಂದು ಪ್ರತಿಧ್ವನಿಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಕುರಿತು ಸದನಕ್ಕೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥ ನರವಣೆ ಉಪಸ್ಥಿತರಿದ್ದರು.

Bipin Rawat and Army Chief General MM Naravane
ಬಿಪಿನ್ ರಾವತ್​, ನರವಾನೆ
author img

By

Published : Feb 11, 2021, 3:22 PM IST

ನವದೆಹಲಿ: ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಮತ್ತು ಆರ್ಮಿ ಚೀಫ್ ಜನರಲ್ ಎಂ.ಎಂ. ನರವಣೆ ಅವರು ಸಂಸತ್​​​ನಿಂದ ನಿರ್ಗಮಿಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ರಾಜ್ಯಸಭೆಯಲ್ಲಿ ಪೂರ್ವ ಲಡಾಖ್​​​​​ನ ಪ್ರಸ್ತುತ ಪರಿಸ್ಥಿತಿ ಕುರಿತು ಮಾಹಿತಿ ನೀಡಿದ್ದು, ಇದಾದ ಬಳಿಕ ರಕ್ಷಣಾ ಪಡೆ ಮುಖ್ಯಸ್ಥ ರಾವತ್ ಹಾಗೂ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಣೆ ಅಲ್ಲಿಂದ ತೆರಳಿದ್ದಾರೆ.

ರಾಜ್ಯಸಭಾ ಕಲಾಪದಲ್ಲಿ ಮಾತನಾಡುತ್ತಿರುವ ರಾಜನಾಥ್ ಸಿಂಗ್, ಪೂರ್ವ ಲಡಾಖ್​​ನಲ್ಲಿನ ಪ್ರಸ್ತುತ ಪರಿಸ್ಥಿತಿ ಕುರಿತು ಹೇಳಿಕೆ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ. ಭಾರತ ಎಂದಿಗೂ ದ್ವಿಪಕ್ಷೀಯ ಸಂಬಂಧವನ್ನು ಕಾಪಾಡಿಕೊಳ್ಳಲು ಒತ್ತು ನೀಡಿದೆ.

ಆದರೆ ಪೂರ್ವ ಲಡಾಖ್​​ನ ವಾಸ್ತವಿಕ ಗಡಿ ರೇಖೆ (ಎಲ್‌ಎಸಿ) ಬಳಿ ಚೀನಾ ಭಾರಿ ಪ್ರಮಾಣದ ಸೇನೆ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿ ನಿಯೋಜಿಸಿದೆ. ಇದಕ್ಕೆ ಪ್ರತಿಯಾಗಿ ನಮ್ಮ ಪಡೆಯನ್ನೂ ಸಜ್ಜುಗೊಳಿಸಲಾಗಿದೆ ಎಂದರು.

ಇದನ್ನೂ ಓದಿ: ಸವಾಲಿನ ಕಾರ್ಯಾಚರಣೆಗಾಗಿ ಭಾರತೀಯ ಸೈನಿಕರಿಗೆ ತರಬೇತಿ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.