ETV Bharat / bharat

Big Breaking: ಚಿಕಿತ್ಸೆ ಫಲಕಾರಿಯಾಗದೇ ಬಿಪಿನ್​ ರಾವತ್​​ ನಿಧನ

author img

By

Published : Dec 8, 2021, 6:16 PM IST

Updated : Dec 8, 2021, 10:54 PM IST

ಬಿಪಿನ್​ ರಾವತ್​​ ಸೇರಿದಂತೆ 14 ಜನರು ಪ್ರಯಾಣ ಮಾಡ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಕನೂರ್​​ನಲ್ಲಿ ಪತನಗೊಂಡಿತ್ತು. ಈ ವೇಳೆ ಗಾಯಗೊಂಡಿದ್ದ ಸೇನಾಪಡೆಗಳ ಮುಖ್ಯಸ್ಥರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

General Bipin Rawat dies
General Bipin Rawat dies

ಚೆನ್ನೈ(ತಮಿಳುನಾಡು): ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್​ ಪತನಗೊಂಡಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಸೇನಾ ಮುಖ್ಯಸ್ಥರನ್ನ ಸ್ಥಳೀಯ ವೆಲ್ಲಿಂಗ್ಟನ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ತಮಿಳುನಾಡಿನ ನೀಲಗಿರಿಯ ಕನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​​ ದುರಂತದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದ ಸೇನಾಪಡೆಗಳ ಮುಖ್ಯಸ್ಥರು ಸಾವಿಗೀಡಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಸೇನೆ ದೃಢಪಡಿಸಿದೆ.

  • With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.

    — Indian Air Force (@IAF_MCC) December 8, 2021 " class="align-text-top noRightClick twitterSection" data=" ">

ಟ್ವೀಟ್​ ಮೂಲಕ ಮಾಹಿತಿ ನೀಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11 ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ವೆಲಿಂಗ್ಟನ್​​​ನಲ್ಲಿ ಉಪನ್ಯಾಸ ನೀಡಲು ರಾವತ್​ ತಮ್ಮ ಪತ್ನಿ ಹಾಗೂ ಸೇನಾ ಸಿಬ್ಬಂದಿ ಜೊತೆ ತೆರಳುತ್ತಿದ್ದರು. ಈ ವೇಳೆ ನೀಲಗಿರಿ ಕನೂರ್​​​ ಸಮೀಪ ಹೆಲಿಕಾಪ್ಟರ್​ ಪತನಗೊಂಡಿತ್ತು.ಘಟನೆಯಲ್ಲಿ ಗಾಯಗೊಂಡಿರುವ ಗ್ರೂಪ್​ ಕ್ಯಾಪ್ಟನ್​ ವರುಣ್​​ ಸಿಂಗ್​​ ಎಸ್​​ಸಿ ವೆಲ್ಲಿಂಗ್ಟನ್​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಹೆಲಿಕಾಪ್ಟರ್​ ಪತನಗೊಳ್ಳಲು ಏನು ಕಾರಣ ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ.

  • Defence Minister Rajnath Singh expresses anguish over the demise of first Chief of Defence Staff Bipin Rawat, his wife and 11 others in the IAF chopper crash, earlier today in Tamil Nadu pic.twitter.com/j2vNzz9CLp

    — ANI (@ANI) December 8, 2021 " class="align-text-top noRightClick twitterSection" data=" ">

ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್ ಕೂಡ ಟ್ವೀಟ್ ಮಾಡಿದ್ದು, ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್​ ಅಪಘಾತದಲ್ಲಿ ರಕ್ಷಣ ಸಿಬ್ಬಂದಿ ಮುಖ್ಯಸ್ಥ ಬಿಪಿನ್​​ ರಾವತ್​​​ ಅವರ ಪತ್ನಿ ಸೇರಿದಂತೆ ಇತರೆ 11 ಮಂದಿ ನಿಧನರಾಗಿದ್ದಾರೆಂದು ತಿಳಿಸಿದ್ದಾರೆ.

Last Updated : Dec 8, 2021, 10:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.