ETV Bharat / bharat

ಸಾರ್ವಜನಿಕ ಶೌಚಾಲಯದಲ್ಲಿ 5 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ - ದೆಹಲಿಯ ಕಿಶನ್ ಗಂಜ್‌ ಪ್ರದೇಶ

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಸಾರ್ವಜನಿಕ ಶೌಚಾಲಯಕ್ಕೆ ಕರೆದೊಯ್ದು 65 ವರ್ಷದ ವೃದ್ಧ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

5 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ
5 ವರ್ಷದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ
author img

By

Published : Oct 19, 2021, 9:56 AM IST

ನವದೆಹಲಿ: 65 ವರ್ಷದ ವೃದ್ಧನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ದೆಹಲಿಯ ಕಿಶನ್ ಗಂಜ್‌ ಪ್ರದೇಶದಲ್ಲಿ ಕಳೆದ ಶನಿವಾರ ಸಂಜೆ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಸಮೀಪದಲ್ಲೇ ಇದ್ದ ಸಾರ್ವಜನಿಕ ಶೌಚಾಲಯಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದಾನೆ. ಬಾಲಕಿಯ ಕಿರುಚಾಟವನ್ನು ಕೇಳಿದ ಜನರು ಬಂದು ಬಾಗಿಲು ಒಡೆದು ಆಕೆಯನ್ನು ರಕ್ಷಿಸಿದ್ದಾರೆ. ಕಾಮುಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾರೆ.

ಇದನ್ನೂ ಓದಿ: 17ರ ಹರೆಯಕ್ಕೆ ಪ್ರೀತಿ-ಪ್ರೇಮ: ಗೆಳೆಯನ ಸಹಾಯದಿಂದ ತಾಯಿಯನ್ನೇ ಕೊಂದ ಬಾಲಕಿ

ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಕಿಶನ್ ಗಂಜ್‌ ಪೊಲೀಸರು ಆರೋಪಿಯನ್ನು ಬಂಧಿಸಿ ಅತ್ಯಾಚಾರ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಜೈಲಿಗೆ ಕಳುಹಿಸಲಾಗಿದೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ತಪಾಸಣೆಯಲ್ಲಿ ಅತ್ಯಾಚಾರ ಆಗಿರುವುದು ದೃಢಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.