ಲೂಧಿಯಾನ: ಜಿಲ್ಲೆಯ ಸಾನೆಟ್ ಎಂಬ ಸರ್ಕಾರಿ ಶಾಲೆಯ ಶೌಚಾಲಯದಲ್ಲಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಹಿತಿ ಪ್ರಕಾರ, ಎರಡನೇ ತರಗತಿಯಲ್ಲಿ ಓದುತ್ತಿದ್ದ ಮಗುವಾಗಿದ್ದು, ಕೊಲೆ ಪ್ರಯತ್ನ ಎಂದು ಪೋಷಕರು ಆರೋಪಿಸಿದ್ದಾರೆ. ಆದರೆ ಇದೊಂದು ಅಪಘಾತ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಮಗುವನ್ನು ಲುಧಿಯಾನದ ಡಿಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಗುವಿನ ಸ್ಥಿತಿ ಗಂಭೀರವಾಗಿದ್ದು ಐಸಿಯುಗೆ ದಾಖಲಿಸಲಾಗಿದೆ. ಶಾಲೆಯ ಆಡಳಿತ ಮಂಡಳಿ ವಿರುದ್ಧ ಮಗುವಿನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಗುವಿನ ಕುತ್ತಿಗೆಯ ಮೇಲೆ ಹಗ್ಗದ ಗುರುತುಗಳು ಕಂಡುಬಂದಿದೆ. ಅದಲ್ಲದೇ ಈ ಘಟನೆಯ ಕುರಿತಾಗಿ ನಮಗೆ ಯಾವುದೇ ರೀತಿಯ ಮಾಹಿತಿಯನ್ನು ನೀಡಿಲ್ಲ. ಇದು ಕೊಲೆ ಪ್ರಯತ್ನ. ಇದರಲ್ಲಿ ಶಾಲೆಯ ಆಡಳಿತ ಮಂಡಳಿ ಶಾಮೀಲಾಗಿದೆ. ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆದರೆ ಪ್ರಾಂಶುಪಾಲರು, ಮಗು ಆಟವಾಡುವಾಗ ಬಿದ್ದು, ಹಗ್ಗ ಸಿಕ್ಕಿಹಾಕಿಕೊಂಡಿದೆ. ಹಾಗಾಗಿ ಮಗು ಪ್ರಜ್ಞಾಹೀನ ಸ್ಥಿತಿ ತಲುಪಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಲೂಧಿಯಾನ.. ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 6 ವರ್ಷದ ಬಾಲಕ ಸಾವು