ನವದೆಹಲಿ: ಅತಿ ದೊಡ್ಡ ಬೆಳವಣಿಗೆಯೊಂದರಲ್ಲಿ ಕೆಲವು ದಿನಗಳ ಹಿಂದೆ ಚೀನಾದಿಂದ ಅಪಹರಿಸಲ್ಪಟ್ಟಿದ್ದ ಎನ್ನಲಾದ ಯುವಕನನ್ನು ಚೀನಾದ ಸೇನೆ ಭಾರತೀಯ ಸೇನೆಗೆ ಹಸ್ತಾಂತರ ಮಾಡಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ.
ಯುವಕನ ವೈದ್ಯಕೀಯ ಪರೀಕ್ಷೆ ಸೇರಿದಂತೆ ಸೂಕ್ತ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಕಿರಣ್ ರಿಜಿಜು ಸ್ಪಷ್ಟನೆ ನೀಡಿದ್ದಾರೆ. ಕಿರಣ್ ರಿಜಿಜು ನಿನ್ನೆಯಷ್ಟೇ ಚೀನಾ ಯುವಕನನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದೆ ಎಂದು ಟ್ವೀಟ್ ಮಾಡಿದ್ದರು.
-
The Chinese PLA has handed over the young boy from Arunachal Pradesh Shri Miram Taron to Indian Army. Due procedures are being followed including the medical examination. https://t.co/xErrEnix2h
— Kiren Rijiju (@KirenRijiju) January 27, 2022 " class="align-text-top noRightClick twitterSection" data="
">The Chinese PLA has handed over the young boy from Arunachal Pradesh Shri Miram Taron to Indian Army. Due procedures are being followed including the medical examination. https://t.co/xErrEnix2h
— Kiren Rijiju (@KirenRijiju) January 27, 2022The Chinese PLA has handed over the young boy from Arunachal Pradesh Shri Miram Taron to Indian Army. Due procedures are being followed including the medical examination. https://t.co/xErrEnix2h
— Kiren Rijiju (@KirenRijiju) January 27, 2022
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಯುವಕನಾದ 17 ವರ್ಷದ ಮಿರಾಮ್ ಟ್ಯಾರೋನ್ ಚೀನಾ ಸೇನೆ ಅಪಹರಿಸಿದೆ ಎಂದು ಪೂರ್ವ ಅರುಣಾಚಲ ಪ್ರದೇಶದ ಸಂಸದ ತಪಿರ್ ಗಾವೋ ಹೇಳಿದ್ದರು. ಈಗ ಆ ಯುವಕನನ್ನು ಚೀನಾ ಸೇನೆ ಭಾರತೀಯ ಸೇನೆಯ ವಶಕ್ಕೆ ನೀಡಿದೆ ಎಂದು ತಿಳಿದು ಬಂದಿದೆ.
ಜನವರಿ 21ರಂದು ಯುವಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಚೀನಾ ವಿದೇಶಾಂಗ ಇಲಾಖೆ ಈ ಬಗ್ಗೆ ತನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿತ್ತು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ