ನವ ದೆಹಲಿ: ಭಾರತ ಮತ್ತು ಚೀನಾ ಗಡಿಯಲ್ಲಿ ಪರಿಸ್ಥಿತಿ 'ಸ್ಥಿರವಾಗಿದೆ' ಎಂದು ಚೀನಾ ತಿಳಿಸಿದೆ. ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಸೈನಿಕರು ಪರಸ್ಪರ ಮುಖಾಮುಖಿಯಾಗಿ ಹೊಡೆದಾಡಿಕೊಂಡ ನಂತರ ನೆರೆ ದೇಶ ಮೊದಲ ಬಾರಿಗೆ ಹೀಗೆ ಪ್ರತಿಕ್ರಿಯಿಸಿದೆ.
'ನಮಗೆ ತಿಳಿದಂತೆ ಗಡಿಯಲ್ಲಿ ಪರಿಸ್ಥಿತಿ ಸ್ಥಿರವಾಗಿದೆ. ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಸಮಸ್ಯೆಯನ್ನು ಬಗೆಹರಿಸಲು ಎರಡೂ ಕಡೆಯವರು ಮಾತುಕತೆ ನಡೆಸುತ್ತಿದ್ದೇವೆ' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಹೇಳಿದ್ದಾರೆ. ತವಾಂಗ್ ಸೆಕ್ಟರ್‌ನ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯ ಬಳಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿತ್ತು. ಸಂಘರ್ಷದಲ್ಲಿ ಎರಡೂ ಕಡೆಯ ಕೆಲವು ಸೈನಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ.
ಇದನ್ನೂ ಓದಿ: ಗಡಿಯಲ್ಲಿ ಅಹಿತಕರ ಘಟನೆ ನಡೆದಿಲ್ಲ, ಶಾಂತಿ ಸ್ಥಾಪಿಸಲಾಗಿದೆ: ಸಂಸತ್ತಿಗೆ ರಾಜನಾಥ್ ಸಿಂಗ್ ಸ್ಷಷ್ಟನೆ