ETV Bharat / bharat

1962ರಲ್ಲಿ ಚೀನಾ ಅಕ್ರಮವಾಗಿ ವಶಪಡಿಸಿಕೊಂಡ ಪ್ರದೇಶದಲ್ಲಿ ಸೇತುವೆ ನಿರ್ಮಿಸಲಾಗ್ತಿದೆ: ಲೋಕಸಭೆಗೆ ಮಾಹಿತಿ ನೀಡಿದ ಸಚಿವರು - ಪ್ಯಾಂಗಾಂಗ್ ಸೇತುವೆ ನಿರ್ಮಾಣ ವಿಚಾರ ಮುರಳೀಧರನ್ ಪ್ರತಿಕ್ರಿಯೆ

ಪೂರ್ವ ಲಡಾಖ್‌ನ ಪ್ಯಾಂಗಾಂಗ್ ಸರೋವರಕ್ಕೆ ಅಡ್ಡಲಾಗಿ ಚೀನಾ ಸೇತುವೆ ನಿರ್ಮಿಸುತ್ತಿರುವ ಪ್ರದೇಶ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

Bridge On Pangong
ಪ್ಯಾಂಗಾಂಗ್ ಸರೋವರ
author img

By

Published : Feb 5, 2022, 10:41 AM IST

ನವದೆಹಲಿ: 1962 ರಿಂದ ಚೀನಾ ಅಕ್ರಮ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿ ಚೀನಾ ಸೇತುವೆ ನಿರ್ಮಾಣ ಮಾಡುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ಶುಕ್ರವಾರ ಲೋಕಸಭೆಯಲ್ಲಿ ಪ್ಯಾಂಗಾಂಗ್ ಸರೋವರಕ್ಕೆ ಅಡ್ಡಲಾಗಿ ಸೇತುವೆಯ ನಿರ್ಮಾಣ ಮಾಡುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಪ್ಯಾಂಗಾಂಗ್ ಸರೋವರಕ್ಕೆ ಚೀನಾ ನಿರ್ಮಿಸುತ್ತಿರುವ ಸೇತುವೆಯನ್ನು ಸರ್ಕಾರ ಗಮನಿಸಿದೆ. ಈ ಸೇತುವೆಯನ್ನು 1962 ರಲ್ಲಿ ಚೀನಾ ಅಕ್ರಮ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿ ನಿರ್ಮಿಸಲಾಗುತ್ತಿದೆ.

ಇದನ್ನೂ ಓದಿ: Srinagar Encounter: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಭಾರತ ಸರ್ಕಾರ ಈ ಅಕ್ರಮವನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಹಲವಾರು ಸಂದರ್ಭಗಳಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ. ಇತರ ದೇಶಗಳು ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಸಚಿವರು ಲೋಕಸಭೆಯಲ್ಲಿ ಹೇಳಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ಚೀನಾ ಕೆಲವು ಸ್ಥಳಗಳ ಮರುನಾಮಕರಣದ ವರದಿಗಳನ್ನು ಭಾರತ ಸರ್ಕಾರ ಗಮನಿಸಿದೆ. ಇದು ನಿರರ್ಥಕ ಕೆಲಸ. ಅರುಣಾಚಲ ಪ್ರದೇಶ ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬ ಅಂಶವನ್ನು ಬದಲಾಯಿಸುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದರು.

ಏನಿದು ವಿವಾದ: 2020ರಲ್ಲಿ ಪ್ಯಾಂಗಾಂಗ್ ಸರೋವರದ ಬಳಿ ಅಂದರೆ ಭಾರತ- ಚೀನಾ ವಾಸ್ತವ ನಿಯಂತ್ರಣ ರೇಖೆ ಬಳಿ ಎರಡೂ ಸೇನೆಗಳ ನಡುವೆ ಕಾಳಗ ನಡೆದಿತ್ತು. ಈ ಸಂದರ್ಭದಲ್ಲಿ ಭಾರತದ 20 ಯೋಧರು ವೀರ ಮರಣವನ್ನಪ್ಪಿದ್ದರು. ಆಗ ನಡೆದ ಮುಷ್ಠಿ ಯುದ್ಧದಲ್ಲಿ ಚೀನಾದ ಕಡೆಯೂ ಅಪಾರ ನಷ್ಟ ಸಂಭವಿಸಿತ್ತು. ಭಾರಿ ಸಾವು- ನೋವಿನ ವರದಿಯಾಗಿತ್ತು. ಆದರೆ, ಚೀನಾ ಮಾತ್ರ ತನ್ನ ದೇಶದ ಎಷ್ಟು ಸೈನಿಕರು ಮೃತಪಟ್ಟಿದ್ದಾರೆ ಎಂಬುದನ್ನು ಇದುವರೆಗೂ ದೃಢಪಡಿಸಿಲ್ಲ.

ಆದರೆ ಅಮೆರಿಕ ಮಾಧ್ಯಮಗಳು, ಲಡಾಖ್​​ನ ಗಲ್ವಾನ್​ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಚೀನಾದ 40ಕ್ಕೂ ಹೆಚ್ಚಿನ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಮಾಡಿದ್ದವು. ಅಷ್ಟೇ ಅಲ್ಲ ಆಸ್ಟ್ರೇಲಿಯಾದ ಪ್ರಮುಖ ಮಾಧ್ಯಮವೊಂದು ಚೀನಾ ಭಾರತಕ್ಕಿಂತ ಹೆಚ್ಚು ನಷ್ಟ ಅನುಭವಿಸಿದೆ ಎಂದು ವರದಿ ಮಾಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.