ETV Bharat / bharat

ಚೈನೀಸ್​​ ಲೋನ್​ ಆ್ಯಪ್​ ಪ್ರಕರಣ: ಬೆಂಗಳೂರಿನ ಐದು ಸ್ಥಳಗಳ ಮೇಲೆ ದಾಳಿ 78 ಕೋಟಿ ವಶ

ಚೀನಾದ ಸಾಲದ ಆ್ಯಪ್ ಪ್ರಕರಣದ ಬಗ್ಗೆ ಇಡಿ ತನಿಖೆ ತೀವ್ರಗೊಂಡಿದೆ. ಈ ಸಂಬಂಧ ಬೆಂಗಳೂರಿನ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸುಮಾರು 78 ಕೋಟಿ ರೂ ವಶಕ್ಕೆ ಪಡೆದಿದ್ದಾರೆ.

Chinese loan app case: ED seizes Rs 78cr after searches
ಚೈನೀಸ್​​ ಲೋನ್​ ಆ್ಯಪ್​ ಪ್ರಕರಣ: ಬೆಂಗಳೂರಿನ ಐದು ಸ್ಥಳಗಳ ಮೇಲೆ ದಾಳಿ 78 ಕೋಟಿ ವಶ
author img

By

Published : Oct 22, 2022, 6:39 AM IST

ನವದೆಹಲಿ: ಚೀನಾ ಸಾಲದ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಹದ್ದಿನ ಕಣ್ಣಿಟ್ಟಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿದೆ. ಇತ್ತೀಚೆಗೆ ಬೆಂಗಳೂರಿನ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಅಪಾರ ಪ್ರಮಾಣದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮೊಬೈಲ್ ಆ್ಯಪ್‌ಗಳ ಮೂಲಕ ಸಣ್ಣ ಮೊತ್ತದ ಸಾಲ ಪಡೆದ ಸಾರ್ವಜನಿಕರಿಗೆ ಸುಲಿಗೆ ಮತ್ತು ಕಿರುಕುಳದಲ್ಲಿ ತೊಡಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ಧ ಬೆಂಗಳೂರು ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ 18 ಎಫ್‌ಐಆರ್‌ಗಳನ್ನು ಆಧರಿಸಿ, ಇಡಿ ಬೆಂಗಳೂರಿನ ಪ್ರಮುಖ ಐದು ಸ್ಥಳಗಳ ಮೇಲೆ ದಾಳಿ ನಡೆಸಿ ಸುಮಾರು 78 ಕೋಟಿ ರೂ ವಶಕ್ಕೆ ಪಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಡಿ ತನಿಖೆ ವೇಳೆ ಸಾಲ ನೀಡುವ ಐದು ಘಟಕಗಳು ಪತ್ತೆಯಾಗಿದ್ದು, ಇವುಗಳನ್ನು ಚೀನಾದ ಪ್ರಜೆಗಳು ನಿಯಂತ್ರಿಸುತ್ತಾರೆ ಎಂದು ತಿಳಿದುಬಂದಿದೆ. ಭಾರತೀಯರ ನಕಲಿ ದಾಖಲೆಗಳನ್ನು ಬಳಕೆ ಮಾಡಿಕೊಂಡು ಈ ಘಟಕಗಳ ಕಾರ್ಯಾಚರಣೆ ನಡೆಯುತ್ತದೆ ಎಂದು ತನಿಖೆ ವೇಳೆ ಬಯಲಾಗಿದೆ.

ಪಾವತಿ ಗೇಟ್‌ವೇಗಳು ಮತ್ತು ಬ್ಯಾಂಕ್‌ಗಳಲ್ಲಿ ಹೊಂದಿರುವ ವಿವಿಧ ವ್ಯಾಪಾರಿ ಐಡಿಗಳ ಮೂಲಕ ಈ ಸಂಸ್ಥೆಗಳು ತಮ್ಮ ಅಕ್ರಮ ವ್ಯವಹಾರ ನಡೆಸುತ್ತಿರುವುದು ಇಡಿ ದಾಳಿ ವೇಳೆ ಪತ್ತೆಯಾಗಿದೆ. ಬೆಂಗಳೂರು ನಗರ ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಡೆಸಿದ ತನಿಖೆ ಮತ್ತು ಮಾಹಿತಿಯ ಆಧಾರದ ಮೇಲೆ ಈ ಪ್ರಕರಣದಲ್ಲಿ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ.

ರೇಜರ್‌ಪೇ ಪ್ರೈವೇಟ್ ಲಿಮಿಟೆಡ್‌ನ ಆವರಣ ಮತ್ತು ಈ ಘಟಕಗಳಿಗೆ ಸಂಬಂಧಿಸಿದ ಬ್ಯಾಂಕ್‌ಗಳ ಅನುಸರಣೆ ಕಚೇರಿಗಳಲ್ಲೂ ಸಹ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಈ ದಾಳಿ ವೇಳೆ, ಹಲವು ಮಹತ್ವದ ಸಂಗತಿಗಳು ಹಾಗೂ ಅಪಾರ ಪ್ರಮಾಣದ ದಾಖಲೆಗಳು ಇಡಿ ಅಧಿಕಾರಿಗಳಿಗೆ ಸಿಕ್ಕಿವೆ.

ಚೀನಾದ ವ್ಯಕ್ತಿಗಳ ನಿಯಂತ್ರಣದಲ್ಲಿರುವ ಈ ಘಟಕಗಳಲ್ಲಿ 78 ಕೋಟಿ ರೂಪಾಯಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಇದುವರೆಗೂ 95 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ:ಸ್ಟಾಕ್​ ಮಾರ್ಕೆಟ್​ನಲ್ಲಿ 'ಹೂಡಿಕೆ ಮಾಡಿ ನಿಶ್ಚಿಂತೆಯಿಂದಿರಿ' ಧೋರಣೆ ನಡೆಯಲ್ಲ: ಯಾಕೆ ಗೊತ್ತಾ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.