ETV Bharat / bharat

ಪಂಜಾಬ್​ ಸೆಕ್ರೆಟರಿಯೇಟ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕದ ಯೋಧ ಆತ್ಮಹತ್ಯೆ - ಸಿಐಎಸ್‌ಎಫ್

ಕರ್ನಾಟಕದ ದಾವಣಗೆರೆ ಮೂಲದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​ನ ಚಂಡೀಗಢದಲ್ಲಿ ನಡೆದಿದೆ.

cisf-jawan-from-karnataka-commits-suicide-in-punjab-civil-secretariat
ಪಂಜಾಬ್​ ಸೆಕ್ರೆಟರಿಯೇಟ್​ನಲ್ಲಿ ಕರ್ತವ್ಯ ನಿಯೋಜನೆಗೊಂಡಿದ್ದ ಕರ್ನಾಟಕದ ಯೋಧ ಆತ್ಮಹತ್ಯೆ
author img

By

Published : Apr 2, 2023, 4:22 PM IST

ಚಂಡೀಗಢ: ಪಂಜಾಬ್​ ಹರಿಯಾಣ ಸೆಕ್ರೆಟರಿಯೇಟ್​ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಕರ್ನಾಟಕದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ನಾಗರಾಜು ಸಾವಿಗೆ ಶರಣಾದ ಯೋಧ ಎಂದು ಗುರುತಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್)ಯಲ್ಲಿ ಸೇವೆ ಸಲ್ಲಿಸಿದ್ದರು.

ಚಂಡೀಗಢದಲ್ಲಿರುವ ಪಂಜಾಜ್​ ಹರಿಯಾಣ ಸೆಕ್ರೆಟರಿಯೇಟ್‌ನಲ್ಲಿ ನಾಗರಾಜು ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಇಂದು ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಚಂಡೀಗಢ ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆದರೆ, ಯೋಧನ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನೂ ಬಹಿರಂಗವಾಗಿಲ್ಲ. ಅಲ್ಲದೇ, ಘಟನಾ ಸ್ಥಳದಲ್ಲಿ ಯಾವುದೇ ಡೆತ್​ನೋಟ್​ ಕೂಡ ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಈ ಬಗ್ಗೆ ಸೆಕ್ಟರ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಎಸ್‌ಐ ವೀರೇಂದ್ರ ಸಿಂಗ್ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಮೃತ ಯೋಧನ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಹಿಮಕುಸಿತಕ್ಕೆ ಯೋಧ ಸಾವು: ನಾಲ್ಕು ದಿನಗಳ ನಂತರ ಮೃತದೇಹ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.