ETV Bharat / bharat

ಹಿರಿಯ ಅಧಿಕಾರಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

author img

By

Published : Sep 30, 2021, 10:53 AM IST

ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್​ನ ಹಿರಿಯ ಅಧಿಕಾರಿ ಮೇಲೆ ಅಪರಿಚಿತರು ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

Civic official from Mira-Bhayandar shot at in Mumbai
ಮುಂಬೈನಲ್ಲಿ ಹಿರಿಯ ಅಧಿಕಾರಿ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ

ಮುಂಬೈ(ಮಹಾರಾಷ್ಟ್ರ): ಬೈಕ್​​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮೀರಾ-ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ಹಿರಿಯ ಅಧಿಕಾರಿಯ ಮೇಲೆ ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಂಬಿಎಂಸಿಯ ಎಕ್ಸಿಕ್ಯುಟಿವ್ ಇಂಜಿನಿಯರ್ ದೀಪಕ್ ಖಂಬಿತ್ ಎಂಬುವರ ಮೇಲೆ ದಾಳಿ ನಡೆಸಲಾಗಿದ್ದು, ದೀಪಕ್ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೇ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೀಪಕ್ ಪಾಲ್ಘರ್ ಜಿಲ್ಲೆಯಿಂದ ಮೀರಾ ರಸ್ತೆ ಪ್ರದೇಶಕ್ಕೆ ಕಾರಿನಲ್ಲಿ ತೆರಳುವ ವೇಳೆ ಅಪರಿಚಿತರು ದಾಳಿ ನಡೆಸಿದ್ದಾರೆ.

ಕಸ್ತೂರಬಾ ಮಾರ್ಗ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಅವರು ಸಿಸಿಟಿವಿ ದೃಶ್ಯಾವಳಿಗಳ ಲಭ್ಯವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ದೀಪಕ್ ಖಂಬಿತ್ ಇತ್ತೀಚೆಗೆ ಅನಧಿಕೃತ ಕಟ್ಟಡಗಳ ತೆರವು ಮಾಡಲು ಆದೇಶ ಹೊರಡಿಸಿದ್ದರು ಎಂಬ ವಿಚಾರದ ಹಿನ್ನೆಲೆಯಲ್ಲೂ ಕೂಡಾ ತನಿಖೆ ನಡೆಸಲಾಗುತ್ತಿದೆ.

ಇದ್ನನೂ ಓದಿ: ದೇವನಹಳ್ಳಿ: ವಿಮಾನದಲ್ಲಿ ಸೀಟ್ ಕೆಳಗೆ ಮರೆಮಾಚಿ ಕಳ್ಳ ಸಾಗಣೆ.. 61 ಲಕ್ಷ ಮೌಲ್ಯದ ಚಿನ್ನ ವಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.