ಶೋಪಿಯಾನ್(ಜಮ್ಮು- ಕಾಶ್ಮೀರ): ಇಂದು ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶೋಪಿಯಾನ್ನ ಜೈನಾಪೋರಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ. ಮೃತ ವ್ಯಕ್ತಿಯನ್ನು 20ರ ಆಸುಪಾಸಿನ ಹರೆಯದ ಶಾಹಿದ್ ಅಹ್ಮದ್ ಎಂದು ಗುರುತಿಸಲಾಗಿದೆ.
ಸಿಆರ್ಪಿಎಫ್ ಯೋಧರ ಮೇಲೆ ಅಪರಿಚಿತ ಉಗ್ರರು ದಾಳಿ ನಡೆಸಿದ್ದು, ಈ ವೇಳೆ ಉಗ್ರರು ಮತ್ತು ಸೇನೆ ನಡುವೆ ಗುಂಡಿನ ಚಕಮಕಿ ನಡೆದ ಸಂದರ್ಭ ನಾಗರಿಕ ಬಲಿಯಾಗಿದ್ದಾನೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಉಪಟಳ: ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯ