ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರು ಹಿರಿಯ-ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎನ್.ವಿ.ರಮಣ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ನೇಮಕ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಿದ್ದಾರೆ.
ಈ ಬಗ್ಗೆ ಸಿಜೆಐ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡಲು ಶಿಫಾರಸು ಮಾಡಿದ್ದಾರೆ.
ಇದನ್ನೂ ಓದಿ: ದೇಶಕ್ಕಾಗಿ ಚಿನ್ನ ಗೆದ್ದು ವಿಶ್ವ ದಾಖಲೆ ನಿರ್ಮಿಸಿದ 19ರ ಶೂಟರ್ ನರ್ವಾಲ್!
ಸಿಜೆಐ ಬೊಬ್ಡೆ ಏಪ್ರಿಲ್ 23 ರಂದು ನಿವೃತ್ತಿ ಹೊಂದಲಿದ್ದಾರೆ. ಈ ಹಿನ್ನೆಲೆ ಶುಕ್ರವಾರ, ಕಾನೂನು ಸಚಿವ ರವಿಶಂಕರ್ ಪ್ರಸಾದ್, ಉತ್ತರಾಧಿಕಾರಿಯನ್ನು ಶಿಫಾರಸು ಮಾಡುವಂತೆ ಸಿಜೆಐ ಬೊಬ್ಡೆ ಅವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಉತ್ತರಿಸಿರುವ ಸಿಜೆಐ ಮುಂದಿನ ಉತ್ತರಾಧಿಕಾರಿಯ ಹೆಸರನ್ನು ಸೂಚಿಸಿ ಕೇಂದ್ರಕ್ಕೆ ಪತ್ರ ರವಾನಿಸಿದ್ದಾರೆ. ಈ ಶಿಫಾರಿಸಿನ ಅನ್ವಯ ಕೇಂದ್ರ ತನ್ನ ನಿರ್ಧಾರ ಕೈಗೊಳ್ಳಲಿದೆ. ಕೇಂದ್ರದ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಹೊಸ ಸಿಜೆಐ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಿದ್ದಾರೆ.