ಪಲ್ನಾಡು(ಆಂಧ್ರಪ್ರದೇಶ): ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಗಾಜಿನ ಬಾಟಲಿಗಳು, ಕಲ್ಲು, ದೊಣ್ಣೆಗಳಿಂದ ದಾಳಿ ಮಾಡಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚರ್ಲದಲ್ಲಿ ನಡೆದಿದೆ. ಟಿಡಿಪಿ ಕಾರ್ಯಾಲಯಕ್ಕೆ ಬೆಂಕಿ ಹಚ್ಚಲಾಗಿದೆ.
ಮಾಚರ್ಲ ತಾಲೂಕು ಪಂಚಾಯತ್ ಪ್ರಭಾರಿ ಜೂಲಕಾಂತಿ ಬ್ರಹ್ಮಾರೆಡ್ಡಿ ನೇತೃತ್ವದಲ್ಲಿ ಪುರಸಭೆ ಕಚೇರಿ ಬಳಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗುತ್ತಿತ್ತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ವೈಎಸ್ಆರ್ ಕಾರ್ಯಕರ್ತರು ಅಲ್ಲಿಗೆ ಆಗಮಿಸಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ. ಇದರಿಂದ ಗಲಾಟೆ ಶುರುವಾಗಿದ್ದು, ಪರಸ್ಪರ ಕಲ್ಲು ತೂರಾಟ ಮತ್ತು ದೊಣ್ಣೆಗಳಿಂದ ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.
ಅಲ್ಲದೇ, ಕೆಲವರ ಮನೆಗಳ ಮೇಲೂ ದಾಳಿ ಮಾಡಲಾಗಿದೆ. ಅನೇಕ ಕಾರುಗಳನ್ನು ಜಖಂಗೊಳಿಸಲಾಗಿದೆ. ಒಂದು ಕಾರಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಘರ್ಷಣೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಎರಡೂ ಗುಂಪುಗಳನ್ನು ಚದುರಿಸಿದ್ದಾರೆ. ಸದ್ಯ ಮಾಚರ್ಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: ಮನೆಗೆ ನುಗ್ಗಿ ಪ್ರಾಂಶುಪಾಲನಿಗೆ ಸುತ್ತಿಗೆಯಿಂದ ಹೊಡೆದು ಕೊಂದ ಯುವಕ