ಮುಜಾಫರ್ನಗರ(ಉತ್ತರ ಪ್ರದೇಶ): 10ನೇ ತರಗತಿ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಟ್ಯೂಷನ್ ಕ್ಲಾಸ್ಗೆ ತೆರಳಿದ್ದ ಅಪ್ರಾಪ್ತೆಯ ಅಪಹರಣ ಮಾಡಿರುವ ಇಬ್ಬರು ಕಾಮುಕರು ಬಾಲಕಿಗೆ ಡ್ರಗ್ಸ್ ಸೇವನೆ ಮಾಡಿಸಿದ್ದು, ಅರಣ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರೊಂದಿಗೆ ಮತ್ತಿಬ್ಬರು ಸೇರಿಕೊಂಡಿದ್ದು, ನಾಲ್ವರು ಸೇರಿಕೊಂಡು ದುಷ್ಕೃತ್ಯವೆಸಗಿದ್ದಾರೆ.
ರಾತ್ರಿಯಾದರೂ ಮಗಳು ಮನೆಗೆ ಬಂದಿಲ್ಲ ಎಂದು ಕುಟುಂಬಸ್ಥರು, ಪೊಲೀಸರ ಸಹಾಯದೊಂದಿಗೆ ಹುಡುಕಾಟ ನಡೆಸಲು ಮುಂದಾಗಿದ್ದ ವೇಳೆ, ಅರೆಪ್ರಜ್ಞಾವಸ್ಥೆಯಲ್ಲಿ ಸಿಕ್ಕಿದ್ದಾಳೆ. ಈ ವೇಳೆ ತನ್ನ ಮೇಲೆ ನಡೆದಿರುವ ದುಷ್ಕೃತ್ಯದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದಾಳೆ.
ಇದನ್ನೂ ಓದಿರಿ: VIDEO.. ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣಪಕ್ಷಿ.. ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯಾವಳಿ!
ಈಗಾಗಲೇ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದು, ಮತ್ತಿಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ ಎಂದು ಎಸ್ಹೆಚ್ಒ ಬಬ್ಲು ಸಿಂಗ್ ವರ್ಮಾ ತಿಳಿಸಿದ್ದಾರೆ. ಅತ್ಯಾಚಾರಕ್ಕೊಳಗಾಗಿರುವ ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು,ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ ಎಂದು ವೈದ್ಯರು ವರದಿ ನೀಡಿದ್ದಾರೆ.