ಮುಂಬೈ(ಮಹಾರಾಷ್ಟ್ರ): ದೇಶದಲ್ಲಿ ಕಳೆದ ಕೆಲ ವಾರಗಳಿಂದ ಮಹಾಮಾರಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದೆ. ಇದರ ಬೆನ್ನಲ್ಲೇ 2021ನೇ ಸಾಲಿನ 10ನೇ ತರಗತಿ ಹಾಗೂ 12ನೇ ತರಗತಿ ಪರೀಕ್ಷೆ ಮೂಂದೂಡಿಕೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಹಾಕಿದೆ.
-
Given the current #COVID19 situation in Maharashtra, we’ve postponed state board exams for class 10th & 12th. Class 12th exams will be held by end of May, while 10th standard exams will be in June. Fresh dates will be announced accordingly: Maharashtra Education Minister pic.twitter.com/HB7Xg9yXYD
— ANI (@ANI) April 12, 2021 " class="align-text-top noRightClick twitterSection" data="
">Given the current #COVID19 situation in Maharashtra, we’ve postponed state board exams for class 10th & 12th. Class 12th exams will be held by end of May, while 10th standard exams will be in June. Fresh dates will be announced accordingly: Maharashtra Education Minister pic.twitter.com/HB7Xg9yXYD
— ANI (@ANI) April 12, 2021Given the current #COVID19 situation in Maharashtra, we’ve postponed state board exams for class 10th & 12th. Class 12th exams will be held by end of May, while 10th standard exams will be in June. Fresh dates will be announced accordingly: Maharashtra Education Minister pic.twitter.com/HB7Xg9yXYD
— ANI (@ANI) April 12, 2021
ಕೇಂದ್ರ ಬೋರ್ಡ್ ಪರೀಕ್ಷೆ ಮುಂದೂಡಿಕೆ ಮಾಡುವಂತೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಈಗಾಗಲೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ.
ಕೋವಿಡ್ ಹೆಚ್ಚಾಗುತ್ತಿರುವ ಕಾರಣ 12ನೇ ತರಗತಿ ಬೋರ್ಡ್ ಪರೀಕ್ಷೆ ಮೇ ಕೊನೆಯಲ್ಲಿ ಹಾಘೂ 10ನೇ ತರಗತಿ ಪರೀಕ್ಷೆ ಜೂನ್ ತಿಂಗಳಲ್ಲಿ ನಡೆಸಲಾಗುವುದು ಎಂದು ಅಲ್ಲಿನ ಶಿಕ್ಷಣ ಸಚಿವ ವರ್ಷಾ ಗಾಯಕ್ವಾಡ್ ತಿಳಿಸಿದ್ದಾರೆ. ಪರೀಕ್ಷಾ ದಿನಾಂಕವನ್ನ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯದ ಸ್ಥಿತಿಯಲ್ಲಿ ರಾಜ್ಯದಲ್ಲಿ ಪರೀಕ್ಷೆ ನಡೆಸುವುದು ಕಷ್ಟ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲೂ ನಿತ್ಯ ಹೆಚ್ಚಿನ ಕೋವಿಡ್ ಸೋಂಕಿತ ಪ್ರಕರಣ ದಾಖಲಾಗುತ್ತಿರುವ ಕಾರಣ ಈಗಾಗಲೇ ನೈಟ್ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಪರಿಸ್ಥಿತಿ ಮುಂದುವರಿದರೆ ಲಾಕ್ಡೌನ್ ಮಾಡುವ ಇರಾದೆ ಸಹ ಇಟ್ಟುಕೊಳ್ಳಲಾಗಿದೆ.
ಇದನ್ನೂ ಓದಿ: ಸಿಬಿಎಸ್‌ಇ ಬೋರ್ಡ್ ಪರೀಕ್ಷೆ ರದ್ದುಗೊಳಿಸಿ: ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಿಯಾಂಕಾ ಆಗ್ರಹ
ಕೇಂದ್ರದ ಸಿಬಿಎಸ್‌ಇ ಬೋರ್ಡ್‌ನ 10ನೇ ಮತ್ತು 12ನೇ ತರಗತಿ ಪರೀಕ್ಷೆಗಳು 2021ರ ಮೇ 4ರಿಂದ ಆರಂಭವಾಗಿ ಜೂನ್ 10ರಂದು ಮುಕ್ತಾಯಗೊಳ್ಳಲಿವೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ. ಜತೆಗೆ ಜೂನ್ 15ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ ಎಂಬ ಮಾಹಿತಿ ಸಹ ನೀಡಿದ್ದರು. ಇದಕ್ಕೆ ದೇಶಾದ್ಯಂತ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.