ETV Bharat / bharat

ಮಾಜಿ ಸಿಎಂ ಮುಲಾಯಂ ಸಿಂಗ್​ ಯೋಗಕ್ಷೇಮ ವಿಚಾರಿಸಿದ ಸಿಎಂ ಆದಿತ್ಯನಾಥ್

author img

By

Published : Oct 3, 2022, 11:12 AM IST

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ಇತ್ತೀಚೆಗಷ್ಟೇ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಆದರೆ ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಎಂದು ಭಾನುವಾರ ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾಜಿ ಸಿಎಂ ಮುಲಾಯಂ ಸಿಂಗ್​ ಯೋಗಕ್ಷೇಮ ವಿಚಾರಿಸಿದ ಸಿಎಂ ಆದಿತ್ಯನಾಥ್
CM Adityanath inquired about the welfare of former CM Mulayam Singh

ಲಖನೌ(ಉತ್ತರ ಪ್ರದೇಶ): ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೂತ್ರಕೋಶ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಅಖಿಲೇಶ್ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಮುಲಾಯಂ ಸಿಂಗ್ ಯಾದವ್ ಅವರನ್ನು ಇತ್ತೀಚೆಗಷ್ಟೇ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆದರೆ, ಅವರು ಇನ್ನೂ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ ಎಂದು ಭಾನುವಾರ ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • "Spoke to SP chief Akhilesh Yadav after information about the ill health of his father Mulayam Singh Yadav was received. I pray to God that he gets well soon," tweeted Defence Minister Rajnath Singh pic.twitter.com/hzwqv97Ht3

    — ANI (@ANI) October 2, 2022 " class="align-text-top noRightClick twitterSection" data=" ">

ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್, ಪುತ್ರ ಅರ್ಜುನ್, ಮುಲಾಯಂ ಅವರ ಕಿರಿಯ ಸಹೋದರ ಶಿವಪಾಲ್ ಸಿಂಗ್ ಯಾದವ್, ಮುಲಾಯಂ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಕೂಡ ಮುಲಾಯಂ ಅವರನ್ನು ಭೇಟಿ ಮಾಡಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮುಲಾಯಂ ಸಿಂಗ್ ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರ ತಂದೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ ಎಂದು ತಿಳಿದುಬಂದಿದೆ. ಮುಲಾಯಂ ಅವರು ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಹಾರೈಸಿದರು ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಮೇದಾಂತ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಮಾತನಾಡಿ, ಮುಲಾಯಂ ಸಿಂಗ್ ಯಾದವ್‌ಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಸೂಚಿಸಿದರು.

  • यूपी के पूर्व मुख्यमंत्री श्री मुलायम सिंह यादव जी की सेहत खराब होने की मिडिया के माध्यम से जानकारी प्राप्त हुई,मैं भगवान से उनके शीघ्र स्वस्थ्य होने की कामना एवं प्रार्थना करता हूँ!

    — Keshav Prasad Maurya (@kpmaurya1) October 2, 2022 " class="align-text-top noRightClick twitterSection" data=" ">

ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಮುಲಾಯಂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿ, ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಲಾಯಂ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಮುಲಾಯಂ ಸಿಂಗ್ ಅವರ ಅನಾರೋಗ್ಯದ ಸುದ್ದಿ ಬಂದಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ವಾರಣಾಸಿಯಲ್ಲಿ ಸಮಾಜವಾದಿ ಪಕ್ಷದ ಕಾರ್ಯಕರ್ತರು ಬಾಬಾಸಾಹೇಬ್ ಅಂಬೇಡ್ಕರ್ ವಾಹಿನಿಯ ಬ್ಯಾನರ್ ಅಡಿಯಲ್ಲಿ ಮುಲಾಯಂ ಶೀಘ್ರ ಗುಣಮುಖರಾಗಲಿ ಎಂದು ಆದಿ ಶಕ್ತಿ ಪಥ ಹವನ ನಡೆಸಿದರು. ಮುಲಾಯಂ ಸಿಂಗ್ ಯಾದವ್ ತಮ್ಮೆಲ್ಲರ ಪೋಷಕರಾಗಿದ್ದಾರೆ ಅಂಬೇಡ್ಕರ್ ವಾಹಿನಿ ಪ್ರಧಾನ ಕಾರ್ಯದರ್ಶಿ ಸತ್ಯ ಪ್ರಕಾಶ್ ಸೋಂಕರ್ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಸೇರಿದ ಬಳಿಕ ಮುಲಾಯಂ ಭೇಟಿಯಾದ ಸೊಸೆ ಅಪರ್ಣಾ ಯಾದವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.