ETV Bharat / bharat

ಕೋವಿಡ್​ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ನೆರವಾಗಲು ರಾಜಸ್ಥಾನ ಸಿಎಂ ಅನುದಾನ ಘೋಷಣೆ

ಕೋವಿಡ್​ನಿಂದ ಮೃತಪಟ್ಟವರನ್ನು ಸ್ಮಶಾನಕ್ಕೆ ಕೊಂಡೊಯ್ಯವಾಗ ಜಾಗ್ರತೆಯಿಂದ ತೆಗೆದುಕೊಂಡು ಹೋಗಬೇಕೆಂದು ಅಶೋಕ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ.

cm-ashok-gehlot-has-sanctioned-34-dot-56-crores-to-urban-bodies-for-the-last-rites-of-the-corona-dead
ಕೋವಿಡ್​ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ನೆರವಾಗಲು ರಾಜಸ್ಥಾನ ಸಿಎಂ ಅನುದಾನ ಘೋಷಣೆ
author img

By

Published : Apr 27, 2021, 10:47 PM IST

ಜೈಪುರ( ರಾಜಸ್ಥಾನ) : ಕೋವಿಡ್​ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸುಮಾರು 34.56 ಕೋಟಿ ರೂಪಾಯಿಯನ್ನು ಘೋಷಣೆ ಮಾಡಿದ್ದು, ಇದನ್ನು ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಕೋವಿಡ್​ನಿಂದ ಮೃತಪಟ್ಟವರನ್ನು ಸ್ಮಶಾನಕ್ಕೆ ಕೊಂಡೊಯ್ಯವಾಗ ಜಾಗ್ರತೆಯಿಂದ ತೆಗೆದುಕೊಂಡು ಹೋಗಬೇಕು ಎಂದು ಅಶೋಕ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡಲಾಗುತ್ತಿದ್ದು, ಅಂತ್ಯಕ್ರಿಯೆಯ ವೆಚ್ಚವನ್ನು ಸ್ಥಳೀಯ ಆಡಳಿತವೇ ಭರಿಸುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಗರ ಪ್ರದೇಶಗಳಲ್ಲಿ ಸ್ಥಳೀಯ ಆಡಳಿತ ಮಂಡಳಿಗಳು ಆಂಬ್ಯುಲೆನ್ಸ್‌ ಮತ್ತು ಅಂತ್ಯಕ್ರಿಯೆಯ ವ್ಯಾನ್‌ಗಳನ್ನು ವ್ಯವಸ್ಥೆಗೊಳಿಸುತ್ತವೆ. ಒಂದು ವೇಳೆ ಬೇರೆ ಸ್ಥಳದಲ್ಲಿ ಅಂತ್ಯಕ್ರಿಯೆ ಮಾಡಲು ಬಯಸಿದರೆ ಅದಕ್ಕೆ ತಕ್ಕಂತೆ ಎಲ್ಲ ಅನುಕೂಲಗಳನ್ನು ಸರ್ಕಾರ ಮಾಡುತ್ತದೆ ಎಂದು ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿ: ವಿವಾದಕ್ಕೀಡಾದ ಕಿರಣ್ ಖೇರ್ ದೇಣಿಗೆ ವಿಚಾರ: ​ ವೆಂಟಿಲೇಟರ್​ ಖರೀದಿಗೆ1 ಕೋಟಿ ನೀಡಿದ್ದ ನಟಿ

ಗ್ರಾಮೀಣ ಪ್ರದೇಶಗಳ ವಿಷಯದಲ್ಲಿ, ಅಂತ್ಯಕ್ರಿಯೆಗೆ ಅಗತ್ಯವಾದ ವ್ಯವಸ್ಥೆಗಳನ್ನು ಸಂಬಂಧಪಟ್ಟ ಉಪವಿಭಾಗಾಧಿಕಾರಿ ಮೇಲ್ವಿಚಾರಣೆ ಮಾಡುತ್ತಾರೆ. ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಗ್ರಾಮೀಣ ಸಂಸ್ಥೆಗಳು ಆಂಬ್ಯುಲೆನ್ಸ್‌ಗಳು, ಅಂತ್ಯಕ್ರಿಯೆಯ ವಾಹನಗಳು ಮತ್ತು ಅಂತ್ಯಕ್ರಿಯೆಯ ವಿಧಿಗಳಿಗೆ ಅಗತ್ಯವಾದ ವಸ್ತುಗಳನ್ನು ವ್ಯವಸ್ಥೆ ಮಾಡಲಿವೆ ಎಂದು ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.