ETV Bharat / bharat

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅರುಣ್ ಸಿಂಗ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ - Karnataka cm in delhi

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ, ಮಾತುಕತೆ ನಡೆಸಿದರು.

cabinet
cabinet
author img

By

Published : Aug 3, 2021, 12:19 PM IST

ನವದೆಹಲಿ: ರಾಜ್ಯ ಸಂಪುಟ ರಚನೆ ಕುರಿತು ಮಾತುಕತೆ ನಡೆಸಲು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯಸಭೆಯಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಜೊತೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕೂಡ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು. ಇಂದು ಸಚಿವ ಸಂಪುಟಕ್ಕೆ ಯಾರೆಲ್ಲ ಸೇರಲಿದ್ದಾರೆ ಎಂಬುದು ಫೈನಲ್ ಆಗಲಿದೆ ಎನ್ನಲಾಗುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದೆ.

ಸಂಪುಟ ರಚನೆ ಸರ್ಕಸ್ ಆರಂಭಿಸಿರುವ ಸಿಎಂ ಬೊಮ್ಮಾಯಿ ಎರಡು ದಿನಗಳಿಂದ ದೆಹಲಿಯಲ್ಲೇ ಇದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಇಂದು ಕೂಡ ಕೇಂದ್ರದ ನಾಯಕರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ಇಂದು ರಾತ್ರಿ ನೂತನ ಸಚಿವರ ಪಟ್ಟಿ ಪ್ರಕಟ... ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.