ETV Bharat / bharat

ಮಹಾತ್ಮ ಗಾಂಧೀಜಿ - ವಾಜಪೇಯಿ ಸಮಾಧಿಗೆ ಸಿಎಂ ಬೊಮ್ಮಾಯಿ ಪುಷ್ಪನಮನ.. ಸೀತಾರಾಮನ್​ ಭೇಟಿ - ಸಿಎಂ ಬಸವರಾಜ ಬೊಮ್ಮಾಯಿ ಮಹಾತ್ಮ ಗಾಂಧೀಜಿ ಸಮಾಧಿಗೆ ಭೇಟಿ

ರಾಷ್ಟ್ರ ರಾಜಧಾನಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಘಾಟ್​ನಲ್ಲಿರುವ ಮಹಾತ್ಮ ಗಾಂಧಿ ಸಮಾಧಿ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಪುಷ್ಪನಮನ ಸಲ್ಲಿಸಿದ್ದಾರೆ.

CM Basavaraj Bommai pays floral tribute to Mahatma Gandhi at Raj Ghat
ಪುಷ್ಪನಮನ ಸಲ್ಲಿಸಿದ ಸಿಎಂ
author img

By

Published : Jul 31, 2021, 12:28 PM IST

Updated : Jul 31, 2021, 1:06 PM IST

ನವದೆಹಲಿ:ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ರಾಜಘಾಟ್​ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿರವರ ಹಾಗೂ ರಾಷ್ಟ್ರೀಯ ಸ್ಮ್ರಿತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಭೇಟಿ ನೀಡಿ ನಮನ ಸಲ್ಲಿಸಿದರು.

ಪುಷ್ಪನಮನ ಸಲ್ಲಿಸಿದ ಸಿಎಂ

ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಹುಬ್ಬಳ್ಳಿ-ಧಾರವಾಡಕ್ಕೆ ಏಮ್ಸ್ ಮಂಜೂರು ಮಾಡುವಂತೆ ಹಾಗೂ ರಾಯಚೂರಿಗೆ ಏಮ್ಸ್ ಮಾದರಿಯ ವೈದ್ಯಕೀಯ ಸಂಸ್ಥೆ ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ. ಸಿಎಂ ಆದ ಬಳಿಕ ಬೊಮ್ಮಾಯಿ ಅವರದ್ದು ಇದೇ ಮೊದಲ ದೆಹಲಿ ಭೇಟಿಯಾಗಿದೆ.

ಸೀತಾರಾಮನ್​ ಭೇಟಿಯಾದ ಸಿಎಂ
ಸೀತಾರಾಮನ್​ ಭೇಟಿಯಾದ ಸಿಎಂ

ಸೀತಾರಾಮನ್​ ಭೇಟಿ: ಸಿಎಂ ಬಸವರಾಜ್​ ಬೊಮ್ಮಾಯಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಬರಬೇಕಾ ಜಿಎಸ್​ಟಿ ಪರಿಹಾರ, ರಾಜ್ಯಕ್ಕೆ ನೀಡಬೇಕಾಗಿರುವ ಇತರ ಅನುದಾನಗಳನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಜ್ಯದ ಕೇಂದ್ರ ಸಹಭಾಗಿತ್ವದ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವಂತೆಯೂ ಬೇಡಿಕೆ ಸಲ್ಲಿಸಿದರು.

ಸಚಿವ ಮನ್ ಸುಖ್ ಮಾಂಡವೀಯ ಭೇಟಿಯಾದ ಸಿಎಂ
ಸಚಿವ ಮನ್ ಸುಖ್ ಮಾಂಡವೀಯ ಭೇಟಿಯಾದ ಸಿಎಂ

ಬಳಿಕ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದರು.

Last Updated : Jul 31, 2021, 1:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.