ETV Bharat / bharat

ಚುನಾವಣೆಯಲ್ಲಿ ಗೆದ್ರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಉತ್ತರಾಖಂಡ ಸಿಎಂ ಧಾಮಿ - ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಇನ್ನೆರಡೇ ದಿನಗಳು ಬಾಕಿಯಿರುವ ಹಾಗೂ ಕರ್ನಾಟಕದಲ್ಲಿ ಹಿಜಾಬ್​ ವಿವಾದ ಉಲ್ಬಣಗೊಳ್ಳುತ್ತಿರುವ ಈ ವೇಳೆಯಲ್ಲಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಏಕರೂಪ ನಾಗರಿಕ ಸಂಹಿತೆಯ ಭರವಸೆ ನೀಡಿದ್ದಾರೆ.

ಸಿಎಂ ಧಾಮಿ
ಸಿಎಂ ಧಾಮಿ
author img

By

Published : Feb 12, 2022, 12:53 PM IST

ಡೆಹ್ರಾಡೂನ್​ (ಉತ್ತರಾಖಂಡ): ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುತ್ತೇವೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದರು.

ಮದುವೆ, ವಿಚ್ಛೇದನ, ಆಸ್ತಿ, ಉತ್ತರಾಧಿಕಾರ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಎಲ್ಲರಿಗೂ ಒಂದೇ ರೀತಿಯ ಕಾನೂನು ಜಾರಿಗೆ ತರಲು ಏಕರೂಪ ನಾಗರಿಕ ಸಂಹಿತೆಯ ಕರಡು ತಯಾರಿಸಲು ಸಮಿತಿಯನ್ನು ರಚಿಸಲಾಗುವುದು. ಈ ಏಕರೂಪ ನಾಗರಿಕ ಸಂಹಿತೆಯು ನಮ್ಮ ಸಂವಿಧಾನವನ್ನು ರೂಪಿಸಿದವರ ಕನಸುಗಳನ್ನು ನನಸಾಗಿಸುವ ಮತ್ತು ಸಂವಿಧಾನದ ಚೈತನ್ಯ ಗಟ್ಟಿಗೊಳಿಸುವತ್ತ ಒಂದು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಸಿಎಂ ಧಾಮಿ ಹೇಳಿದರು.

ಉತ್ತರಾಖಂಡ ವಿಧಾನಸಭೆ ಚುನಾವಣೆಗೆ ಇನ್ನೆರಡೇ ದಿನಗಳು ಬಾಕಿಯಿರುವ ಹಾಗೂ ಕರ್ನಾಟಕದಲ್ಲಿ ಹಿಜಾಬ್​ ವಿವಾದ ಉಲ್ಬಣಗೊಳ್ಳುತ್ತಿರುವ ಈ ವೇಳೆಯಲ್ಲಿ ಪುಷ್ಕರ್ ಸಿಂಗ್ ಏಕರೂಪ ನಾಗರಿಕ ಸಂಹಿತೆಯ ಭರವಸೆ ನೀಡಿದ್ದಾರೆ. ಚುನಾವಣೆ ನಂತರ ದೇವಭೂಮಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಉತ್ತರಾಖಂಡ ಸಿಎಂ ಭರವಸೆಯನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಬಿಜೆಪಿ ಸಮಾನತೆ ಮತ್ತು ಸಬಲೀಕರಣದ ಕಡೆಗೆ ಗಮನ ಹರಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Watch: ಉತ್ತರಾಖಂಡದಲ್ಲಿ 'ಬಿಜೆಪಿ' ಅಧಿಕಾರಕ್ಕೆ ಬರಲ್ಲ ಎಂದ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​

ತೇಜಸ್ವಿ ಸೂರ್ಯ ಟ್ವೀಟ್​: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲೋಕಸಭಾ ಸಂಸದ ತೇಜಸ್ವಿ ಸೂರ್ಯ, "ಉತ್ತರಾಖಂಡದ ವೈವಿಧ್ಯತೆ ಮತ್ತು ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲು ಏಕರೂಪ ನಾಗರಿಕ ಸಂಹಿತೆಯ ಅವಶ್ಯಕತೆ ಬಹಳ ಹಿಂದಿನಿಂದಲೂ ಇದೆ. ಉತ್ತರಾಖಂಡದ ಗುರುತನ್ನು ರಕ್ಷಿಸಲು ನಿಮ್ಮ ಬದ್ಧತೆಗೆ ಧನ್ಯವಾದಗಳು" ಎಂದು ಟ್ವೀಟ್​ ಮಾಡಿದ್ದಾರೆ.

ರಾಜ್ಯದಲ್ಲಿ 70 ಸ್ಥಾನಗಳಿಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.