ETV Bharat / bharat

ರಾಜಧಾನಿಯಲ್ಲಿ ವೀಕೆಂಡ್​​​ ಲಾಕ್​​​ಡೌನ್​: ಪರಿಸ್ಥಿತಿ ಪರಿಶೀಲನಾ ಸಭೆ ಕರೆದ ಕೇಜ್ರಿವಾಲ್ - ಕೊರೊನಾ ಪರಿಶೀಲನಾ ಸಭೆ ಕರೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಾಹ್ನ 1 ಗಂಟೆಗೆ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ನಡೆಸಲಿದ್ದಾರೆ. ಈ ವೇಳೆ ಕೋವಿಡ್​ ನಿರ್ವಹಣೆಗೆ ಕೈಗೊಂಡದ ಕ್ರಮಗಳ ಕುರಿತು ಪರಿಶೀಲಿಸಲಾಗುವುದು.

CM Kejriwal to review COVID situation in Delhi
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
author img

By

Published : Apr 17, 2021, 12:29 PM IST

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಧ್ಯಾಹ್ನ 1 ಗಂಟೆಗೆ ಕೋವಿಡ್-19 ಪರಿಸ್ಥಿತಿ ಪರಿಶೀಲಿಸಲು ಸಭೆ ನಡೆಸಲಿದ್ದಾರೆ. ಕೋವಿಡ್-19 ನಿರ್ವಹಣೆಯ ನೋಡಲ್ ಸಚಿವರಾಗಿರುವ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

"ದೆಹಲಿಯ ಕೊರೊನಾ ಪರಿಸ್ಥಿತಿಯನ್ನು ದಿನನಿತ್ಯದ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಂದು ಮಧ್ಯಾಹ್ನ 1 ಗಂಟೆಗೆ ನೋಡಲ್ ಸಚಿವರು, ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತು ಪರಿಶೀಲನಾ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ಈಗಾಗಲೇ ದೆಹಲಿಯಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ವಾರಾಂತ್ಯದಲ್ಲಿ ಕರ್ಫ್ಯೂ (ಶುಕ್ರವಾರ ರಾತ್ರಿ 10 ರಿಂದ ಸೋಮವಾರ ಬೆಳಗ್ಗೆ 5 ರವರೆಗೆ) ಜಾರಿಯಲ್ಲಿದೆ. ಶುಕ್ರವಾರ, ದೆಹಲಿಯಲ್ಲಿ 19,486 ಹೊಸ ಕೊರೊನಾ ಪ್ರಕರಣಗಳು ಮತ್ತು 141 ಸಾವುಗಳು ದಾಖಲಾಗಿವೆ.

ಇದನ್ನೂ ಓದಿ: ಕೊರೊನಾ ಉಲ್ಬಣ ಹಿನ್ನೆಲೆ ಸಾಂಕೇತಿಕ ಕುಂಭಮೇಳ ನಡೆಸಲು ಮೋದಿ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.