ಕೋಲ್ಕತ್ತಾ(ಪಶ್ಚಿಮ ಬಂಗಾಳ): ಸಿಎಂ ಮಮತಾ ಬ್ಯಾನರ್ಜಿ ಅವರ ಸಹೋದರ ಆಶಿಮ್ ಬ್ಯಾನರ್ಜಿ ಇಂದು ವಿಧಿವಶರಾಗಿದ್ದಾರೆ.
ಕೆಲ ದಿನಗಳ ಹಿಂದೆ ಆಶಿಮ್ ಬ್ಯಾನರ್ಜಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಈ ಹಿನ್ನೆಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಏತನ್ಮಧ್ಯೆ, ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ 20,846 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ.