ಸಿಧಿ (ಮಧ್ಯಪ್ರದೇಶ) : ಜಿಲ್ಲೆಯ ರಾಂಪುರ್ ನಾಯ್ಕಿನ್ಗೆ ಮಂಗಳವಾರ ಆಗಮಿಸಿದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಸ್ ಕಾಲುವೆಗೆ ಉರುಳಿ ಬಿದ್ದು ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
ಸಿಧಿಯಿಂದ ಸತ್ನಾಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದ್ದು, ಘಟನೆಯಿಂದ ಇದುವರೆಗೆ 50 ಮೃತಪಟ್ಟಿದ್ದಾರೆ. ದುರಂತದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಓದಿ : ಸಿಧಿಯಲ್ಲಿ ಬಸ್ ದುರಂತ: ಮೃತರ ಸಂಖ್ಯೆ 49ಕ್ಕೆ ಏರಿಕೆ
ದುರಂತಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.