ಗೋರಖ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಅಧಿಕಾರಕ್ಕೆ ಬರಲು ಸಜ್ಜಾಗಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಅಮೋಘ ಜಯಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪಕ್ಷದ ಪ್ರಬಲ ಗೆಲುವಿಗಾಗಿ ಪ್ರಧಾನಿ ಮೋದಿಯವರ ನೀತಿಗಳನ್ನು ಶ್ಲಾಘಿಸಿದ್ದಾರೆ.
ರಾಜ್ಯದ ವಿಸ್ತಾರವನ್ನು ಗಮನದಲ್ಲಿಟ್ಟುಕೊಂಡು ಎಲ್ಲರೂ ಯುಪಿ ಮೇಲೆ ಕಣ್ಣಿಟ್ಟಿದ್ದರು. ನಮ್ಮನ್ನು ಬಹುಮತದಿಂದ ಗೆಲ್ಲಿಸಿದ ಜನರಿಗೆ ನಾನು ಆಭಾರಿಯಾಗಿದ್ದೇನೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಾವು ಯುಪಿ, ಗೋವಾ, ಮಣಿಪುರ ಮತ್ತು ಉತ್ತರಾಖಂಡದಲ್ಲಿ ಸರ್ಕಾರಗಳನ್ನು ರಚಿಸುತ್ತೇವೆ. ರಾಜ್ಯದಲ್ಲಿ 7 ಹಂತದ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಇದು ಉತ್ತಮ ಮಾದರಿಯಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ನಾನು ಭಯೋತ್ಪಾದಕನಲ್ಲ, ನಿಜವಾದ ‘ದೇಶಭಕ್ತ’ ಎಂಬುದನ್ನು ಜನ ತೋರಿಸಿದ್ದಾರೆ: ಕೇಜ್ರಿವಾಲ್
ನಾವು ಕೋವಿಡ್ ವಿರುದ್ಧ ಹೋರಾಡುತ್ತಿದ್ದಾಗ ಅವರು (ವಿರೋಧ ಪಕ್ಷ) ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದರು. ಆದರೆ, ನಮ್ಮನ್ನು ಗೆಲ್ಲಿಸುವ ಮೂಲಕ ಜನರು ಮತ್ತೊಮ್ಮೆ ರಾಷ್ಟ್ರೀಯತೆ, ಉತ್ತಮ ಆಡಳಿತಕ್ಕೆ ಮತ ಹಾಕಿದ್ದಾರೆ. ಕೆಲಸ ಮಾಡುವುದನ್ನು ಮುಂದುವರಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಸಿಎಂ ತಿಳಿಸಿದರು.
ಉತ್ತರಪ್ರದೇಶ (403/403) | |||||
---|---|---|---|---|---|
ಬಿಜೆಪಿ+ | ಎಸ್ಪಿ+ | ಬಿಎಸ್ಪಿ | ಕಾಂಗ್ರೆಸ್ | ಇತರೆ | |
ಮುನ್ನಡೆ/ಗೆಲುವು | 274 | 124 | 1 | 2 | 2 |