ಗೋರಖ್‌ಪುರ (ಉತ್ತರ ಪ್ರದೇಶ): ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಮಥುರಾದಲ್ಲಿ ನಡೆದ ಆಚರಣೆಯಲ್ಲಿ ಭಾಗವಹಿಸಿದ ಬಳಿಕ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೋರಖ್‌ಪುರದ ಗೋರಖನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಆದಿತ್ಯನಾಥ್ ಅವರು ದೇವಸ್ಥಾನದಲ್ಲಿ ಭಕ್ತರು ಮತ್ತು ಅರ್ಚಕರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಮತ್ತು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.
ಇದಕ್ಕೂ ಮೊದಲು ಅವರು ಲಖನೌದ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಜನ್ಮಾಷ್ಟಮಿ ಆಚರಣೆಯಲ್ಲಿ ಪಾಲ್ಗೊಂಡಿದ್ದರು. ಗೋರಖನಾಥನಿಗೆ ಪೂಜೆ ಸಲ್ಲಿಸಿದ ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಭಾಗವಹಿಸಿದ್ದರು. ಮಧ್ಯರಾತ್ರಿಯವರೆಗೂ ಯೋಗಿ ಅವರು ಶ್ರೀಕೃಷ್ಣ ವಿಗ್ರಹವನ್ನು ಹೊತ್ತುಕೊಂಡಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಕೃಷ್ಣನ ಜೀವನವನ್ನು ಮರುಸೃಷ್ಟಿಸಲಾಯಿತು.
ಓದಿ: ಮಥುರಾ ಕೃಷ್ಣ ದೇಗುಲದಲ್ಲಿ ಮಂಗಳಾರತಿ ವೇಳೆ ನೂಕುನುಗ್ಗಲು.. ಇಬ್ಬರು ಭಕ್ತರ ಸಾವು