ರಾಣಿಗಂಜ್ (ಪಶ್ಚಿಮ ಬಂಗಾಳ): ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ್ ಬರ್ಧಮಾನ್ ಜಿಲ್ಲೆಯ ರಾಣಿಗಂಜ್ನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಮೂರು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ನಾರಾಯಣಕುರಿಯ ಈಸ್ಟರ್ನ್ ಕೋಲ್‌ಫೀಲ್ಡ್ ಲಿಮಿಟೆಡ್‌ನಲ್ಲಿ (ಇಸಿಎಲ್) ಗಣಿ ಕುಸಿದಿದೆ. ಈಗಾಗಲೇ ಮೂರು ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಸನ್ಸೋಲ್ ದುರ್ಗಾಪುರ ಉಪ ಪೊಲೀಸ್ ಆಯುಕ್ತ ಎಸ್.ಎಸ್.ಕುಲದೀಪ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಮತ್ತೊಂದೆಡೆ, ಏಳು ಜನರ ಶವಗಳು ಪತ್ತೆಯಾಗಿವೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ ಎಂದು ಬಿಜೆಪಿ ಶಾಸಕಿ ಅಗ್ನಿಮಿತ್ರ ಪಾಲ್ ಹೇಳಿದ್ದಾರೆ. ಇದರಿಂದಾಗಿ ಮೃತರ ಸಂಖ್ಯೆಯ ಬಗ್ಗೆ ಸದ್ಯಕ್ಕೆ ಗೊಂದಲವಿದೆ.
ಬುಧವಾರ ರಾತ್ರಿಯಿಡೀ ರಕ್ಷಣಾ ಕಾರ್ಯದ ಮೇಲುಸ್ತುವಾರಿ ವಹಿಸಿದ್ದ ಶಾಸಕಿ, ''ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿಲ್ಲ. ಇಸಿಎಲ್ ರಕ್ಷಣಾ ತಂಡ ಕೂಡ ಬಂದಿಲ್ಲ. ರಾಜ್ಯ ಸರ್ಕಾರದ ರಕ್ಷಣಾ ತಂಡ ರಕ್ಷಣಾ ಕಾರ್ಯವನ್ನೂ ಕೈಗೊಂಡಿಲ್ಲ. ಸ್ಥಳೀಯ ಜನರೇ ಮೃತರನ್ನು ಹೊರತೆಗೆದಿದ್ದಾರೆ" ಎಂದು ದೂರಿದ್ದಾರೆ.
ಇದನ್ನೂ ಓದಿ: ಗೇಮಿಂಗ್ ಆ್ಯಪ್ನಲ್ಲಿ 1.5 ಕೋಟಿ ರೂ. ಬಹುಮಾನ ಗೆದ್ದಿದ್ದ ಪಿಎಸ್ಐ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಪತ್ರ...