ಲಖಿಂಪುರ್(ಅಸ್ಸೋಂ): ಲವರ್ನಿಂದ ಹಲ್ಲೆಗೊಳಗಾಗಿದ್ದ ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಅಸ್ಸೋಂನ ಲಖಿಂಪುರ್ದಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
ಆಗಸ್ಟ್ 24ರಂದು ವಿದ್ಯಾರ್ಥಿನಿ ನಂದಿತಾ ಸೈಕಿಯಾ ಮೇಲೆ ಆಕೆಯ ಲವರ್ ರಿಂಟು ಶರ್ಮಾ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನ ಧೇಮಾಜಿ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ತೀವ್ರ ರಕ್ತಸ್ರಾವವಾಗಿದ್ದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ದಿಬ್ರುಗಢ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿರಿ: ಅಂತ್ಯಕ್ರಿಯೆ ವೇಳೆ ಹೆಂಡತಿ ಚಿತೆಗೆ ಹಾರಿ ಪ್ರಾಣಬಿಟ್ಟ ಗಂಡ!
ನಂದಿತಾ ಮರಿಧಾಲ್ ಕಾಲೇಜ್ನಲ್ಲಿ ಬಿಎ ಮೂರನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಆಕೆಯ ಸ್ನೇಹಿತೆ ಹಾಗೂ ತಂದೆ ಜೊತೆ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಹಲ್ಲೆ ನಡೆಸಲಾಗಿತ್ತು. ಪ್ರಕರಣದಲ್ಲಿ ಭಾಗಿಯಾಗಿರುವ ರಿಂಟು ಶರ್ಮಾಗೆ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ನಡೆಯುವುದಕ್ಕೂ ಕೆಲ ದಿನಗಳ ಮುಂಚೆ ರಿಂಟು ಯುವತಿ ನಂದಿತಾ ಮನೆಗೆ ಭೇಟಿ ನೀಡಿ, ಮದುವೆ ವಿಷಯ ಪ್ರಸ್ತಾಪ ಮಾಡಿದ್ದನು. ಇದನ್ನ ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡಿದ್ದ ಯುವಕ ಈ ರೀತಿಯಾಗಿ ನಡೆದುಕೊಂಡಿದ್ದಾನೆಂದು ತಿಳಿದು ಬಂದಿದೆ.