ಉನ್ನಾವೋ(ಉತ್ತರಪ್ರದೇಶ): ಉತ್ತರಪ್ರದೇಶದ ಉನ್ನಾವೋದಲ್ಲಿ ಮತ್ತೊಂದು ಭೀಕರ ಅತ್ಯಾಚಾರ, ಸಾವು ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಯುವತಿಯ ಮೇಲೆ ಶಕ್ತಿವರ್ಧಕ ಮಾತ್ರೆ ಸೇವಿಸಿದ್ದ ಯುವಕನೊಬ್ಬ ಅತ್ಯಾಚಾರ ಮಾಡಿದ್ದು, ತೀವ್ರ ರಕ್ತಸ್ರಾವದಿಂದ ಸಂತ್ರಸ್ತೆ ಮೃತಪಟ್ಟಿದ್ದಾಳೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉನ್ನಾವೋದಲ್ಲಿ ಕಾಲೇಜು ವಿದ್ಯಾರ್ಥಿನಿಯಾಗಿದ್ದ ಸಂತ್ರಸ್ತೆ ಮನೆಯಲ್ಲಿ ಒಂಟಿಯಾಗಿದ್ದಾಗ ಸಮಯ ಸಾಧಿಸಿ ಒಳನುಗ್ಗಿರುವ ಆರೋಪಿ, ಯುವತಿಯ ಮೇಲೆ ಬಲಾತ್ಕಾರ ಮಾಡಿದ್ದಾನೆ. ಇದನ್ನು ವಿರೋಧಿಸಿದರೂ ಬಿಡದ ಆತ ಕ್ರೌರ್ಯ ಮೆರೆದಿದ್ದಾನೆ. ಈ ವೇಳೆ, ಯುವತಿಯ ಗುಪ್ತಾಂಗದಲ್ಲಿ ತೀವ್ರ ರಕ್ತಸ್ರಾವವಾಗಿದೆ.
ಇದನ್ನು ಕಂಡ ಕ್ರೂರಿ ಅತ್ಯಾಚಾರಿ ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದಿದ್ದ ಯುವತಿಯನ್ನು ಕಂಡ ಸಹೋದರಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದಾಗ, ಸಂತ್ರಸ್ತೆ ಸಾವನ್ನಪ್ಪಿದ್ದನ್ನು ವೈದ್ಯರು ಘೋಷಿಸಿದ್ದಾರೆ.
ಶಕ್ತಿವರ್ಧಕ ಮಾತ್ರೆ ಸೇವಿಸಿದ್ದೆ: ಸಂತ್ರಸ್ತೆಯ ತಂದೆ ನೆರೆಹೊರೆಯವರು ಮತ್ತು ಒಬ್ಬ ಮಹಿಳೆಯ ವಿರುದ್ಧ ಈ ಹಿಂದೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಫೋನ್ ಕರೆ ಆಧಾರದ ಮೇಲೆ ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆತ ರೇಪ್ ಮಾಡುವ ಮೊದಲು ಶಕ್ತಿವರ್ಧಕ ಮಾತ್ರೆ ತೆಗೆದುಕೊಂಡಿದ್ದೆ ಎಂದು ಬಾಯ್ಬಿಟ್ಟಿದ್ದಾನೆ. ಯುವತಿಯನ್ನು ಕ್ರೂರವಾಗಿ ನಡೆಸಿಕೊಂಡ ಕಾರಣ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಅಲ್ಲದೇ, ತೀವ್ರ ಒತ್ತಡದ ಕಾರಣ ಖಾಸಗಿ ಅಂಗದಲ್ಲಿ ಗಾಯವಾಗಿ, ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎಂದು ವರದಿ ಹೇಳಿದೆ.
ಓದಿ: ಪ್ರೇಮಿಯನ್ನು ನಂಬಿ ಪೋಷಕರನ್ನು ಬಿಟ್ಟು ಬಂದ ಯುವತಿ.. ತುಂಡಾಗಿ ಕತ್ತರಿಸಿ ಬೀದಿಗಳಲ್ಲಿ ಎಸೆದ ಪ್ರಿಯಕರ!