ನವದೆಹಲಿ: ದೇಶಾದ್ಯಂತ ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 3.5 ರೂಪಾಯಿ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬಂದಿದೆ.
ಈ ಹಿಂದೆ ಮೇ 7 ರಂದು ಅಡುಗೆ ಅನಿಲ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಜಾಸ್ತಿಯಾಗಿದ್ದು, ಜನಸಾಮಾನ್ಯರು ಪರಿತಪಿಸುವಂತಾಗಿದೆ. ದೆಹಲಿ ಮತ್ತು ಮುಂಬೈನಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್ ದರ 1,003 ರೂ. ಇದೆ.
ಇದನ್ನೂ ಓದಿ: ಜನತೆಗೆ ಬೆಲೆ ಏರಿಕೆ ಶಾಕ್: ಎಲ್‌ಪಿಜಿ ಸಿಲಿಂಡರ್ ಮತ್ತೆ 50 ರೂ. ಹೆಚ್ಚಳ!