ETV Bharat / bharat

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ: ಉದಯನಿಧಿ ಸ್ಟಾಲಿನ್​​ ವಿರುದ್ದ ದೂರು ದಾಖಲು - ಉದಯನಿಧಿ ಸ್ಟಾಲಿನ್ ಹೇಳಿಕೆ

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್​​ ವಿರುದ್ದ ಮುಜಾಫರ್​ ಸಿವಿಲ್ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್
author img

By ETV Bharat Karnataka Team

Published : Sep 4, 2023, 7:25 PM IST

ಮುಜಾಫರ್‌ಪುರ : ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ವಿರುದ್ಧ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ವಕೀಲ ಸುನಿಲ್ ಕುಮಾರ್ ಓಜಾ ಅವರು ಮುಜಾಫರ್‌ಪುರ ಸಿವಿಲ್ ನ್ಯಾಯಾಲಯದಲ್ಲಿ ಉದಯನಿಧಿ ವಿರುದ್ಧ ದೂರು ದಾಖಲಿಸಿದ್ದಾರೆ. ಸನಾತನ ಧರ್ಮಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ನೀಡಿರುವ ವಿವಾದಾತ್ಮಕ ಹೇಳಿಕೆಯಿಂದಾಗಿ ದೇಶಾದ್ಯಂತ ಹಿಂದೂಗಳ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

''ಉದಯನಿಧಿ ಅವರ ಈ ಹೇಳಿಕೆಯು ಹಿಂದೂ ಮತ್ತು ಸನಾತನ ಧರ್ಮದಲ್ಲಿ ನಂಬಿಕೆಯಿರುವ ದೇಶದ ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ. ಆರೋಪಿಗಳು ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ನ್ಯಾಯಾಲಯ ದೂರು ಸ್ವೀಕರಿಸಿದೆ. ನ್ಯಾಯಾಲಯವು ಈ ವಿಷಯವನ್ನು ಸೆಪ್ಟೆಂಬರ್ 14 ರಂದು ವಿಚಾರಣೆ ನಡೆಸಲಿದೆ'' ಎಂದು ವಕೀಲ ಸುನಿಲ್ ಕುಮಾರ್ ಓಜಾ ತಿಳಿಸಿದ್ದಾರೆ.

ಸ್ಟಾಲಿನ್ ಪುತ್ರ ಉದಯನಿಧಿ ವಿರುದ್ಧ ದೂರು ದಾಖಲು : ಉದಯನಿಧಿಯ ಈ ವಿವಾದಾತ್ಮಕ ಹೇಳಿಕೆ ಬಳಿಕ ಇಡೀ ದೇಶದಲ್ಲಿ ಹಾಗೂ ರಾಜಕೀಯ ವಲಯದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಈ ಮಧ್ಯೆ, ಮುಜಾಫರ್‌ಪುರದ ವಕೀಲ ಸುಧೀರ್ ಕುಮಾರ್ ಓಜಾ ಅವರು ಸಿವಿಲ್ ನ್ಯಾಯಾಲಯದಲ್ಲಿ ಉದಯನಿಧಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದಾರೆ. ಯೋಜಿತ ಷಡ್ಯಂತ್ರದ ಭಾಗವಾಗಿ, ಉದಯನಿಧಿ ಅವರು ಸೆಪ್ಟೆಂಬರ್ 2 ರಂದು ಚೆನ್ನೈನಲ್ಲಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸುದ್ದಿ ಟಿವಿ ಚಾನೆಲ್‌ಗಳು ಮತ್ತು ಇತರ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಿಕ್ಕಿಬಿದ್ದ ಉದಯನಿಧಿ : ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಅವರ ಪುತ್ರ ಹಾಗೂ ರಾಜ್ಯ ಸಚಿವ ಉದಯನಿಧಿ ಅವರು ಇತ್ತೀಚೆಗೆ ಸನಾತನ ಧರ್ಮವನ್ನು ಕೊನೆಗಾಣಿಸುವ ಕುರಿತು ಮಾತನಾಡುವಾಗ ಮಲೇರಿಯಾ, ಡೆಂಘಿ, ಕೊರೊನಾ ಮುಂತಾದ ಕಾಯಿಲೆಗಳಿಗೆ ಹೋಲಿಸಿದ್ದರು. ಇಂತಹವುಗಳನ್ನು ವಿರೋಧಿಸಬಾರದು, ನಾಶಪಡಿಸಬೇಕು ಎಂದು ಹೇಳಿದ್ದರು. ತಮಿಳುನಾಡಿನ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವು ತಮಿಳಿನಲ್ಲಿ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮವನ್ನು ‘ಸನಾತನಂ’ ಎಂದು ಉಲ್ಲೇಖಿಸಿದ್ದರು. ಅಲ್ಲದೇ, ಸನಾತನ ಧರ್ಮ ಸಮಾನತೆ ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಶನಿವಾರ ಆರೋಪಿಸಿದ್ದರು.

ಉದಯನಿಧಿ ಸ್ಟಾಲಿನ್ ಹೇಳಿಕೆಯಿಂದ ದೂರ ಉಳಿದ ಕಾಂಗ್ರೆಸ್ : ಡೆಂಘಿ, ಮಲೇರಿಯಾ ಮತ್ತು ಕೊರೊನಾ ಎಂದು ಕರೆಯುವ ಮೂಲಕ ಸನಾತನ ಧರ್ಮವನ್ನು ತೊಡೆದುಹಾಕಬೇಕು ಎಂದು ಉದಯನಿಧಿ ಸ್ಟಾಲಿನ್ ವೇದಿಕೆಯಿಂದಲೇ ಹೇಳಿದ್ದರು. ಅವರ ಹೇಳಿಕೆ ಬೆಳಕಿಗೆ ಬಂದಾಗಿನಿಂದ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ನಿರಂತರವಾಗಿ ವಿರೋಧಿಸುತ್ತಿದ್ದಾರೆ. ಆದರೆ, ಉದಯನಿಧಿ ಸ್ಟಾಲಿನ್ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ.

ಇದನ್ನೂ ಓದಿ: Sanatana Dharma: 'ಸನಾತನ ಧರ್ಮ' ಹೇಳಿಕೆಗೆ ನಾನು ಬದ್ಧ, ಯಾವುದೇ ಸವಾಲು ಎದುರಿಸುವೆ: ಉದಯನಿಧಿ ಸ್ಟಾಲಿನ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.