ಪಣಜಿ: ಮೊಪಾ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕಾಗಿ 54 ಸಾವಿರಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ. ಈ ವಿಮಾನ ನಿಲ್ದಾಣದ ಮೊದಲ ಹಂತವು 2022ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪ್ರಮೋದ್ ಸಾವಂತ್ ಇದುವರೆಗೆ ಶೇಕಡಾ 20ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 54 ಸಾವಿರಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದೆಹಲಿ ಹಿಂಸಾಚಾರದಿಂದ ಒಡಕು, ಪ್ರತಿಭಟನೆ ಹಿಂಪಡೆದ ಎರಡು ರೈತ ಸಂಘಟನೆಗಳು
ಉತ್ತರ ಗೋವಾದ ಮೊಪಾ ಪ್ರಸ್ಥಭೂಮಿಯಲ್ಲಿ ವಿಮಾನ ನಿಲ್ದಾಣವಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಮೊದಲ ಹಂತವು 2022ರಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ ಎಂದು ಪ್ರಮೋದ್ ಸಾವಂತ್ ಅಭಿಪ್ರಾಯಪಟ್ಟಿದ್ದಾರೆ.
ಈ ವಿಮಾನ ನಿಲ್ದಾಣಕ್ಕಾಗಿ ಈವರೆಗೆ 54,176 ಮರಗಳನ್ನು ಕತ್ತರಿಸಲಾಗಿದೆ. ಕಸಿ ಮಾಡಿರುವ ಮರಗಳ ಸಂಖ್ಯೆ ಐದು ನೂರಕ್ಕೂ ಹೆಚ್ಚಿದೆ.
ವಿಮಾನ ನಿಲ್ದಾಣದ ಮೊದಲ ಹಂತವನ್ನು 2020ರ ಸೆಪ್ಟೆಂಬರ್ 3ಕ್ಕೆ ಉದ್ಘಾಟಿಸಲು ನಿರ್ಧಾರ ಮಾಡಲಾಗಿತ್ತು. ಆದರೆ ಕೆಲವು ಪರಿಸರವಾದಿಗಳು ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದ ಕಾರಣದಿಂದ ಕಾಮಗಾರಿ ವಿಳಂಬವಾಯಿತು. ಜಿಎಂಆರ್ ಮತ್ತು ಗೋವಾ ಸರ್ಕಾರದ ಜಂಟಿ ಸಹಯೋಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ.